ಸುಬ್ರಮಣ್ಯ: ಕೆಲ ತಿಂಗಳುಗಳ ಹಿಂದೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಧೀಡಿರಣೆ ಭೇಟಿ ನೀಡಿದ ವಿಷಯ ಮಾಧ್ಯಮಗಳಲ್ಲಿ ಪ್ರಸಾರಗೊಂಡಿತ್ತು.
ಯಾವುದೇ ಪೂರ್ವ ಮಾಹಿತಿ ಇಲ್ಲದೆ ಕತ್ರಿನಾ ಕೈಫ್ ದೇವಸ್ಥಾನಕ್ಕೆ ಆಗಮಿಸಿದ್ದರಿಂದ ಹಲವಾರು ಚರ್ಚೆಗಳು ನಡೆದಿದ್ದವು. ದೇವಸ್ಥಾನದಲ್ಲಿ ದರ್ಶನ ಪಡೆದ ಕತ್ರಿನಾ, ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿ, ಪೂಜೆ-ಪುರಸ್ಕಾರಗಳನ್ನು ಭಕ್ತಿ ಶ್ರದ್ದೆಯಿಂದ ನೆರವೇರಿಸಿದ್ದರು.
ಇದೀಗ ಬಾಲಿವುಡ್ ನಟಿ ಕತ್ರಿನಾ ಗರ್ಭಿಣಿಯಾಗಿದ್ದು, ತಾಯ್ತನಕ್ಕಾಗಿ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಂತಾನಪೂಜೆ ಸಲ್ಲಿಸಿದ್ದಾರೆಯೆಂದು ತಿಳಿದುಬಂದಿದೆ.
ಇದು ಹಿಂದೂ ದೇವಾಲಯಗಳ ಆಧ್ಯಾತ್ಮಿಕ ಶಕ್ತಿ ಮತ್ತು ಪಾವಿತ್ರ್ಯವನ್ನು ಪ್ರತಿಬಿಂಬಿಸುತ್ತದೆ. ಇದನ್ನು ಸೆಲೆಬ್ರಿಟಿಗಳೂ ಸಹ ಅನುಭವಿಸುತ್ತಾರೆ ಎಂಬುದಾಗಿ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.