22 October 2025 | Join group

ಹೃದಯಾಘಾತದಿಂದ ಖ್ಯಾತಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ವಿಧಿವಶ

  • 13 Oct 2025 07:10:10 PM

ವಿಜಯಪುರ: ನಟ, ರಂಗಕರ್ಮಿ ಕಲಿಯುಗದ ಕುಡುಕ ಖ್ಯಾತಿಯ ರಾಜು ತಾಳಿಕೋಟೆ(59) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಅವರು ಖಾಸ್ಗತೇಶ್ವರ ನಾಟಕ ಮಂಡಳಿ ಮಾಲೀಕರಾಗಿದ್ದರು. ನಟ ಹಾಗೂ ರಂಗಕರ್ಮಿ ರಾಜು ತಾಳಿಕೋಟೆ ಧಾರವಾಡದ ರಂಗಾಯಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

 

ಕಲಿಯುಗದ ಕುಡುಕ, ಕುಡುಕರ ಸಾಮ್ರಾಜ್ಯದ ಅಸಲಿ ಕುಡುಕ ನಾಟಕಗಳು, ಪ್ರಮುಖ ನಾಟಕಗಳ ಆಡಿಯೋ ಕ್ಯಾಸೆಟ್ ಬಿಡುಗಡೆ ಮಾಡಿದ್ದರು. ಅವರ ಪೂರ್ಣ ಹೆಸರು ರಾಜೇಸಾಬ ಮುಕ್ತಂಸಾಬ ತಾಳಿಕೋಟೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ನಿವಾಸಿಯಾಗಿದ್ದ ಅವರು ಪ್ರಸ್ತುತ ವಿಜಯಪುರ ಜಿಲ್ಲೆ ತಾಳಿಕೋಟೆಯಲ್ಲಿ ನೆಲೆಸಿದ್ದರು.