ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ.




