03 March 2026 | Join group

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ವಿಧಿವಶ:

  • 24 Nov 2025 02:23:00 PM

ಮುಂಬಯಿ: ಬಾಲಿವುಡ್‌ನ 'ಹೀ ಮ್ಯಾನ್' ಖ್ಯಾತಿಯ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಧರ್ಮೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ಧರ್ಮೇಂದ್ರ ಅಗಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತಾದರೂ ನಂತರ ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿತ್ತು. ಆ ನಂತರ ನಟ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲೇ ಇದ್ದರು.

 

ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

 

ಸಿನಿಮಾ ರಂಗದ ಅತ್ಯಂತ ಸ್ಪುರದ್ರೂಪಿ ನಟನನ್ನು ಬಾಲಿವುಡ್ ಕಳೆದುಕೊಂಡಿದೆ. ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದು, ಧರ್ಮೇಂದ್ರ ಅವರ ಮನೆಗೆ ದೌಡಾಯಿಸುತ್ತಿದ್ದಾರೆ. ನಟರ ಅಂತಿಮ ದರ್ಶನ ಮತ್ತು ಮುಂದಿನ ಕಾರ್ಯಗಳ ಬಗ್ಗೆ ಕುಟುಂಬ ಸದ್ಯದಲ್ಲೇ ತಿಳಿದುಬರಲಿದೆ.

A PHP Error was encountered

Severity: Core Warning

Message: PHP Startup: Unable to load dynamic library 'i360.so' (tried: /usr/local/php74/lib/php/extensions/no-debug-non-zts-20190902/i360.so (libatomic.so.1: cannot open shared object file: No such file or directory), /usr/local/php74/lib/php/extensions/no-debug-non-zts-20190902/i360.so.so (/usr/local/php74/lib/php/extensions/no-debug-non-zts-20190902/i360.so.so: cannot open shared object file: No such file or directory))

Filename: Unknown

Line Number: 0

Backtrace: