15 September 2026 |

ಮಾಜಿ ಸಚಿವ, ಹಿರಿಯ ನಟ ಬಿ.ಸಿ. ಪಾಟೀಲ್ ಈಗ ಕಿರುತೆಯಲ್ಲಿ: ಯಾವ ಪಾತ್ರ ಗೊತ್ತಾ?

  • 03 Jul 2026 01:46:30 AM

ಕನ್ನಡ ಚಿತ್ರರಂಗದ ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. 1990 ರ ದಶಕದಲ್ಲಿ ಹಲವಾರು ಕನ್ನಡ ಸಿನೆಮಾಗಳಲ್ಲಿ ನಟಿಸಿ, ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಿ. ಸಿ . ಪಾಟೀಲ್ ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ಯಲ್ಲಿ ಅವರು ಕರಟಗಿರಿಯ ದೇಸಾಯಿ ಎಂಬ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಜಕೀಯ ರಂಗದಲ್ಲಿ ಕಾಣಿಸಿಕೊಂಡಿದ್ದ ಬಿ ಸಿ ಪಾಟೀಲ್ ಕರ್ನಾಟಕ ರಾಜ್ಯದ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು. ಮೊದಲ ಬಾರಿಗೆ ಕಿರುತೆರೆಗೆ ಎಂಟ್ರಿ ನೀಡಿ, ನಟನ ಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಈ ಧಾರಾವಾಹಿ ಶ್ರೀ ಗುರು ರಾಘವೇಂದ್ರ ತೀರ್ಥರ ಜೀವನ, ಭಕ್ತಿ ಹಾಗೂ ಪವಾಡಗಳನ್ನು ಆಧರಿಸಿದ್ದು, ವಾರಾಂತ್ಯದಲ್ಲಿ ಉತ್ತಮ ವೀಕ್ಷಕ ಪ್ರತಿಕ್ರಿಯೆ ಪಡೆಯುತ್ತಿದೆ. ಮುಂಬರುವ ಸಂಚಿಕೆಗಳಲ್ಲಿ ರಾಯರ ದಿವ್ಯ ಪವಾಡಕ್ಕೆ ಸಂಬಂಧಿಸಿದ ಪ್ರಮುಖ ಕಥಾಹಂದರದಲ್ಲಿ ಬಿ.ಸಿ. ಪಾಟೀಲ್ ಅವರ ಪಾತ್ರ ಮಹತ್ವ ಪಡೆದುಕೊಂಡಿದೆ.

ವಿಶೇಷವೆಂದರೆ, ಹಿರಿಯ ನಟಿ ಅರುಣಾ ಬಾಲರಾಜ್ ಅವರು ದೇಸಾಯಿ ಅವರ ಪತ್ನಿಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಜೋಡಿ ಧಾರಾವಾಹಿಗೆ ಇನ್ನಷ್ಟು ಮೆರುಗು ತಂದಿದೆ. ಈ ವಿಶೇಷ ಸಂಚಿಕೆಗಳು ಶನಿವಾರ ಮತ್ತು ಭಾನುವಾರ ಸಂಜೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿವೆ.