ಮುಂಬಯಿ: ಬಾಲಿವುಡ್ ನಟಿ ರಾಖಿ ಸಾವಂತ್ ಅವರು ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹದ ಕುರಿತು ಗಮನ ಸೆಳೆಯುವ ಹೇಳಿಕೆ ನೀಡಿದ್ದಾರೆ. ಸೋನಂ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಖಿ, ಅವರು ಉಪವಾಸವನ್ನು ಮುರಿಯುವಂತೆ ಮನವಿ ಮಾಡಿದ್ದಾರೆ.
“ನಾನು ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ನನ್ನ ಕೈಯಿಂದಲೇ ಸೋನಂ ವಾಂಗ್ಚುಕ್ ಅವರ ಉಪವಾಸವನ್ನು ಮುರಿಸುತ್ತೇನೆ. ಅವರಿಗೆ ನಿಂಬು ಪಾನಿ, ಮಾವಿನ ರಸ ಹಾಗೂ ಮೊಸಂಬಿ ಜ್ಯೂಸ್ ನೀಡುತ್ತೇನೆ,” ಎಂದು ರಾಖಿ ಸಾವಂತ್ ಹೇಳಿದ್ದಾರೆ.
ಅವರ ಈ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪರ-ವಿರೋಧದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಪ್ರಸ್ತುತ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೋನಂ ವಾಂಗ್ಚುಕ್ ಭಾಗಿಯಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.





