ಮಂಗಳೂರು: ಕರಾವಳಿಯ ಹೆಮ್ಮೆಯ ಕಲಾವಿದೆ ರೂಪಾ ವರ್ಕಾಡಿ ಅವರು ರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಕನ್ನಡದ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅವರು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಕ್ಷಿತ್ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್ ನಿರ್ಮಿಸಿರುವ ಈ ಚಿತ್ರವು ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಮೂರು ಗೌರವಗಳನ್ನು ತನ್ನದಾಗಿಸಿಕೊಂಡಿದೆ.
ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರೂಪಾ ವರ್ಕಾಡಿ ಅವರ ಈ ಸಾಧನೆ ಕರಾವಳಿ ಕಲಾಭಿಮಾನಿಗಳಿಗೆ ಹೆಮ್ಮೆಯ ವಿಷಯವಾಗಿದೆ.
ಅವರ ರಾಷ್ಟ್ರೀಯ ಮಟ್ಟದ ಸಾಧನೆಗೆ ಸಿನಿಪ್ರಿಯರು, ಕಲಾವಿದರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಶುಭ ಹಾರೈಸುತ್ತಿದ್ದಾರೆ.





