ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ. ಪುಷ್ಪಾ ಪಾರ್ಕ್ ಸಮೀಪ ನಡೆದ ಈ ಘಟನೆಯಲ್ಲಿ ನಟ ಅಪಾಯದಿಂದ ಪಾರಾಗಿದ್ದಾರೆ.
ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಟೈಗರ್ ಶ್ರಾಫ್ ಅವರ ಕಾರಿನತ್ತ ಗುಂಡು ಹಾರಿಸಿ, ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ನಟನ ಕಾರಿನ ಚಾಲಕ ಸೇರಿದಂತೆ ಅವರ ಸಿಬ್ಬಂದಿಯ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸ್ಥಳೀಯ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದಾಳಿಯ ಹಿಂದಿನ ಉದ್ದೇಶದ ಕುರಿತು ಹಲವು ಪ್ರಶ್ನೆಗಳು ಮೂಡಿವೆ. ಈ ಕೃತ್ಯದ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೈವಾಡವಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಈಗಾಗಲೇ ಕೋಟಾ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.





