ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಶುಕ್ರವಾರ ಮಕ್ಕಳ ದಿನಾಚರಣೆಯ ಪ್ರಯುಕ್ತ ಅದ್ದೂರಿಯಾಗಿ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ–2025ರಲ್ಲಿ ಸರ್ಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಅತ್ಯಂತ ಮುಖ್ಯ ಎಂದು ಜೆಸಿಐ ತರಬೇತಿದಾರ ಸಂದೀಪ್ ಸಾಲಿಯಾನ್ ಹೇಳಿದರು. ಅವರು ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರ ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತಾನಾಡಿದರು.
ಮಕ್ಕಳು ಶಿಕ್ಷಕರೊಂದಿಗೆ ದಿನದಲ್ಲಿ ಕೇವಲ ಏಳು ಗಂಟೆಗಳಷ್ಟೇ ಕಳೆದರೂ, ಹೆಚ್ಚಿನ ಸಮಯ ಪೋಷಕರೊಂದಿಗೆ ಇರುತ್ತಾರೆ. ಆದ್ದರಿಂದ ಮಕ್ಕಳನ್ನು ಒಳ್ಳೆಯ ಪ್ರಜೆಯಾಗಿಸಬೇಕೆಂದರೆ ಪೋಷಕರ ಪಾತ್ರ ಅತ್ಯಂತ ಮಹತ್ತರ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿ ಪ್ರಕಾಶ್, ತಾಯಂದಿರ ಸಮಿತಿಯ ಉಪಾಧ್ಯಕ್ಷೆ ರೇಖಾ, ಮಾಧ್ಯಮ ವರದಿಗಾರ ಚಿನ್ನಾ ಕಲ್ಲಡ್ಕ ಉಪಸ್ಥಿತರಿದ್ದರು.
ಮಕ್ಕಳು ಕಾರ್ಯಕ್ರಮವನ್ನು ಪ್ರಾರ್ಥನೆಯಿಂದ ಆರಂಭಿಸಿದರು. ಶಿಕ್ಷಕಿ ಪ್ರವೀಣ ಕುಮಾರಿ ಸ್ವಾಗತಿಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಪ್ರಾಸ್ತಾವಿಕದೊಂದಿಗೆ ಶಾಲಾ ವರದಿ ಮಂಡಿಸಿದರು. ಶಿಕ್ಷಕಿ ಅನಿತ ಲಸ್ರಾಡೊ ವಂದಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ವಿಲ್ಮಾ ಪ್ರೆಸಿಲ್ಲ ಪಿಂಟೋ ನಿರೂಪಿಸಿದರು.





