ಕಲ್ಲಡ್ಕ: "ಮಕ್ಕಳ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಶಿಸ್ತು ಮತ್ತು ಸಮಯ ಪಾಲನೆ ಕಾರ್ಯಕ್ರಮದ ಯಶಸ್ವಿಯ ಮೂಲಗುಟ್ಟು" ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಅಡ್ಡದಪಾದೆ ಹೇಳಿದರು.
ಅವರು ಸೋಮವಾರ ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಬೊಂಡಾಲ ಜಗನ್ನಾಥ್ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇದರ ಸಯೋಗದಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ -2025 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಮೋಹಿನಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಭಾ ಕಾರಂಜಿಯಲ್ಲಿ ಕಲ್ಲಡ್ಕ ವಲಯದ 29 ಶಾಲೆಗಳ 320 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರುಗಳಾದ ಸವಿತಾ ರಾಮಚಂದ್ರ, ಹೇಮಲತಾ, ಉಶಾಲಾಕ್ಷಿ, ಬಿ ಐ ಆರ್ ಟಿ ಸುರೇಖಾ, ಸಿ ಆರ್ ಪಿ ಗಳಾದ ಸತೀಶ್, ಸುಧಾಕರ್ ಭಟ್, ದುರ್ಗಾಪರಮೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷ ಕಲಾವತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ವೀಣಾ, ಅಂಗನವಾಡಿ ಕಾರ್ಯಕರ್ತೆ ಶಾಂತ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ಚಂದ್ರಾವತಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿ, ಬೊಂಡಾಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ಶಿಕ್ಷಣ ಸಂಯೋಜಕ ರಮಾನಂದ ಪ್ರಾಸ್ತಾವಿಕ ಭಾಷಣ ಮಾಡಿದರು, ಶಿಕ್ಷಣ ಸಂಯೋಜಕಿ ಪ್ರತಿಮಾ ವಂದಿಸಿದರು. ಶಿಕ್ಷಕಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.





