ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯ, ಉಳಿ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಿಂದ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿನ ವಿಶ್ವಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ ಭಜನಾ ತರಬೇತಿ ಕಾರ್ಯಾಗಾರ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಹಿರಿಯ ಸಂಪನ್ಮೂಲ ವ್ಯಕ್ತಿ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಕಾರ್ಯಾಗಾರ ನಡೆಸಿಕೊಟ್ಟರು. ತಾಲೂಕಿನ 7 ಭಜನಾ ಮಂಡಳಿಯ ಸುಮಾರು 250 ಭಜಕರು ಭಾಗವಹಿಸಿದ್ದರು.
ತರಬೇತಿ ಕಾರ್ಯಗಾರದಲ್ಲಿ ಶ್ರೀಮತಿ ಸಾವಿತ್ರಿ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಭಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು, ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್, ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾಪ್ರತಿನಿಧಿಗಳಾದ ಶೇಖರ್, ಉಷಾ,ಸುಧಾ ಕುಸುಮ ಹಾಗೂ ಭಜನೆ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ರಾಜ್ ಕುಮಾರ್ ವಂದಿಸಿ, ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.





