

ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ರಾಜ್ಯದಲ್ಲಿ ಪ್ರಪ್ರಥಮವಾಗಿ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪದಾಧಿಕಾರಿಗಳು ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ನಿರ್ದೇಶಕ ಬಂಧುಗಳ ಅಭ್ಯಾಸ ವರ್ಗವು ಡಿಸೆಂಬರ್ 2 ಮಂಗಳವಾರ "ನಮ್ಮ ಮನೆ ಹವ್ಯಕ ಭವನ" ಗುರುವಾಯನಕೆರೆಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತಮಾತೆ ಹಾಗೂ ಸಂಸ್ಥಾಪಕರಾದ ಶ್ರೀ ಲಕ್ಷ್ಮಣರಾವ್ ಇನಾಂದಾರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಪುಷ್ಪಾವತಿ .ಆರ್ ಶೆಟ್ಟಿಯವರು, "ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಭಾರತಿ ವತಿಯಿಂದ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ ನಡೆಸಲಾಗುತ್ತಿದ್ದು, ಸಹಕಾರಿ ಭಾರತಿ ಬಂಧುಗಳು ಅಭ್ಯಾಸ ವರ್ಗದಲ್ಲಿ ಸಿಗುವಂತಹ ಮಾಹಿತಿಯನ್ನು ಪಡೆದುಕೊಂಡು ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಹಕಾರ ಭಾರತಿ ಕ್ಷೇತ್ರದ ಬಲವರ್ಧನೆಗೆ ಕಾರಣವಾಗಬೇಕು ಎಂದು ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಭಾರತಿ ಮಹಿಳಾ ಪ್ರಮುಖ್ ಶ್ರೀಮತಿ ಸುಭದ್ರಾ. ಎನ್. ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹಕಾರ ಭಾರತಿ ಕರ್ನಾಟಕ ರಾಜ್ಯ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾ ವಿಜೇತ ಪೈ ಮಾತನಾಡಿ "ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಮಹಿಳೆಯರು ಸಹಕಾರಿ ಕ್ಷೇತ್ರದ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿ, ಸಂಘಟನಾತ್ಮಕವಾಗಿ ಹೆಚ್ಚು ಹೆಚ್ಚು ತೊಡಗಿಸಿಕೊಂಡು ದಕ್ಷಿಣ ಕನ್ನಡ ಸಹಕಾರ ಭಾರತಿಗೆ ಮತ್ತಷ್ಟು ಶಕ್ತಿ ತುಂಬಿಸುವ ಕೆಲಸ ಆಗಲಿ" ಎಂದು ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಭಾರತಿ ಮಹಿಳಾ ಸಹ ಪ್ರಮುಖ್ ಅಮೂಲ್ಯ ಶೆಟ್ಟಿ ಕಟೀಲು ವಂದನಾರ್ಪಣೆಗೈದರು.
ಸಹಕಾರ ಭಾರತಿ ಪರಿಚಯ
ಸಭಾ ಕಾರ್ಯಕ್ರಮದ ಬಳಿಕ ಮೊದಲ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಹಕಾರ ಭಾರತಿಯ ರಾಷ್ಟ್ರೀಯ ಗ್ರಾಹಕ ಪ್ರಕೋಷ್ಠದ ಸಂಚಾಲಕಿ ಶ್ರೀಮತಿ ಭಾರತಿ ಭಟ್ ರವರು ಸಹಕಾರ ಭಾರತಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಕಳೆದ 46 ವರ್ಷಗಳಿಂದ ಸಹಕಾರಿ ರಂಗದಲ್ಲಿ ದೇಶದ ಏಕೈಕ ರಾಷ್ಟ್ರ ಮಟ್ಟದ ಸರಕಾರೇತರ ರಾಜಕೀಯ ರಹಿತ ಸ್ವಯಂಸೇವಾ ಸಂಸ್ಥೆಯಾಗಿರುವ ಸಹಕಾರ ಭಾರತಿ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ನಡೆಸಿಕೊಂಡು ಬರುತ್ತಿರುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ
ಎರಡನೇ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀನಿವಾಸ್ ಮಹಾವಿದ್ಯಾಲಯ ಮಂಗಳೂರಿನ ಸಂಶೋಧನಾ ಪ್ರಾಧ್ಯಾಪಕಿ ಡಾ. ಸುಧಾ. ಕೆ ರವರು ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಅತ್ಯುತ್ತಮವಾದ ಅವಕಾಶಗಳಿದ್ದು, ಸಹಕಾರಿ ಸಂಸ್ಥೆಯ ನಿರ್ದೇಶಕರಾಗಿ ಆಡಳಿತ ನಿರ್ವಹಣೆ, ಸಹಕಾರಿ ಕಾಯಿದೆಗಳ ಬಗ್ಗೆ ಸರಿಯಾದ ಮಾಹಿತಿ ಮತ್ತು ಅನುಭವವನ್ನು ಪಡೆದುಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಸಮಾರೋಪ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಮಹಿಳಾ ಪ್ರಮುಖ್ ಶ್ರೀಮತಿ ಸುಭದ್ರಾ. ಎನ್.ರಾವ್ ಪೆರ್ಮoಕಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದ ದಕ್ಷಿಣ ಕನ್ನಡ ಬಾಲನ್ಯಾಯ ಮಂಡಳಿ ಸದಸ್ಯೆ ಹಾಗೂ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ನ್ಯಾಯವಾದಿ ಶ್ರೀಮತಿ ಸುಮನಾ ಶರಣ್ ರವರು ಮಾತನಾಡುತ್ತಾ, ಮಹಿಳೆಯರನ್ನು ಉತ್ತಮ ಸಹಕಾರಿಗಳಾಗಿ ರೂಪಿಸುವ ಉದ್ದೇಶದಿಂದ ಮಹಿಳಾ ಅಭ್ಯಾಸ ವರ್ಗ ವನ್ನು ಆಯೋಜನೆ ಮಾಡಲಾಗಿದ್ದು, ಇದರ ಸದುಪಯೋಗ ಪಡೆದುಕೊಂಡವರು ಉತ್ತಮ ಸಹಕಾರಿಗಳಾಗಿ ಸಹಕಾರ ಭಾರತಿಯ ಘನತೆ ಗೌರವಗಳಿಗೆ ಚ್ಯುತಿಯಾಗದಂತೆ ನಡೆದುಕೊಳ್ಳಬೇಕೆಂದು ಕಿವಿಮಾತು ತಿಳಿಸಿದರು.
ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷರಾದ ಶ್ರೀ ಸುಧಾಕರ ರೈ ಬೋಳಂತೂರು ರವರು ಮಾತನಾಡುತ್ತಾ,"ಸಹಕಾರಿ ಕ್ಷೇತ್ರದ ಬೈಲಾ ಹಾಗೂ ಕಾಯ್ದೆಗಳಲ್ಲಿ" ಕಾಲಕಾಲಕ್ಕೆ ಆಗುವ ಬದಲಾವಣೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು, ಸಹಕಾರಿ ಸಂಸ್ಥೆಯ ಶ್ರೀಯೋಭಿವೃದ್ಧಿಗಾಗಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದು ತಿಳಿಸಿದರು.
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಸಾಣೂರು ನರಸಿಂಹ ಕಾಮತ್ ರವರು ಮಾತನಾಡುತ್ತಾ, ರಾಜ್ಯದ 32 ಜಿಲ್ಲೆ ಮತ್ತು 3 ಮಹಾನಗರಗಳಲ್ಲಿ ಸಹಕಾರ ಭಾರತಿ ಸಕ್ರಿಯವಾದ ಜಿಲ್ಲಾ ಸಮಿತಿಗಳನ್ನು ಹೊಂದಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದ ಜಿಲ್ಲಾ ಮಹಿಳಾ ಸಮಿತಿಯ ರಚನೆಯಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗವು ಸಂಖ್ಯಾತ್ಮಕವಾಗಿ ಹಾಗೂ ಗುಣಾತ್ಮಕವಾಗಿ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ನಡೆದಿದ್ದು, ಜಿಲ್ಲೆಯ ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗವನ್ನು ನೀಡುತ್ತಿರುವುದು ಸಂತಸದ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪ್ರಮುಖ್ ಶ್ರೀಮತಿ ಸುಭದ್ರಾ. ಎನ್. ರಾವ್ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನೆಲ್ಲಾ ತಾಲೂಕುಗಳಿಂದ ಬಹು ಸಂಖ್ಯೆಯಲ್ಲಿ ಉತ್ಸಾಹದಿಂದ ಮಹಿಳೆಯರು ಪಾಲ್ಗೊಂಡಿರುವುದು ಸಹಕಾರಿ ಭಾರತಿ ಸಂಘಟನೆಗೆ ಇನ್ನಷ್ಟು ಶಕ್ತಿ ತುಂಬುವಂತಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೂಡ ಮಹಿಳಾ ಅಭ್ಯಾಸ ವರ್ಗಗಳನ್ನು ನಡೆಸಿ, ತಳಮಟ್ಟದವರೆಗೆ ಸಂಘಟನೆಯ ಜಾಲವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ರಾಜ್ಯ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾ ವಿಜೇತ ಪೈ, ರಾಜ್ಯಸಂಘಟನಾ ಕಾರ್ಯದರ್ಶಿ ಶ್ರೀ ಮಂಜುನಾಥ್ ಬಿ ಆರ್, ರಾಜ್ಯ ಸಹ ಕಾರ್ಯದರ್ಶಿ ಶ್ರೀ ಗಣೇಶ್ ಶೆಣೈ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀ ಸುರೇಶ್ ಆಳ್ವ, ಕೋಶಾಧಿಕಾರಿ ಶ್ರೀ ಸುಬ್ರಹ್ಮಣ್ಯ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ವಿಶ್ವನಾಥ ಎಮ್, ಶ್ರೀ ಕೆ ವಿ ಪ್ರಸಾದ್, ಕೆಎಂಎಫ್ ಮಂಗಳೂರಿನ ನಿರ್ದೇಶಕರುಗಳಾದ ಶ್ರೀ ಭರತ್ ನೆಕ್ರಾಜೆ, ಶ್ರೀ ಪ್ರಭಾಕರ್, ಶ್ರೀಮತಿ ಸವಿತಾ ಎನ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಉಪಾಧ್ಯಕ್ಷೆ ಶ್ರೀಮತಿ ವಿಮಲಾ ಸೋಮಶೇಖರ್ ಪೈಕ ಅರಂತೋಡು, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಶ್ರೀಲತಾ ಕೆ ಶೆಟ್ಟಿ ಕರೋಪಾಡಿ, ಸಹಕಾರ ಭಾರತಿ ಮಂಗಳೂರು ತಾಲೂಕು ಮಹಿಳಾ ಪ್ರಮುಖ್ ಶ್ರೀಮತಿ ಲತಾ ಹೆಗ್ಡೆ, ಕಡಬ ತಾಲೂಕು ಪ್ರಮುಖ್ ಶ್ರೀಮತಿ ಭಾರತಿ ದಿನೇಶ್, ಬಂಟ್ವಾಳ ತಾಲೂಕು ಪ್ರಮುಖ್ ಶ್ರೀಮತಿ ಶಾಂತ ಡಿ ಚೌಟ, ಬೆಳ್ತಂಗಡಿ ತಾಲೂಕು ಪ್ರಮುಖ್ ಶ್ರೀಮತಿ ಭಾರತಿ ಕೆ ಕಣಿಯೂರು, ಜಿಲ್ಲಾ ಪ್ಯಾಕ್ಸ್ ಪ್ರೊಕೋಸ್ಟದ ಪ್ರಮುಖರಾದ ಶ್ರೀ ಈಶ್ವರ ನಾಯ್ಕ್, ಮಂಗಳೂರು ಗ್ರಾಮಾಂತರ ಅಧ್ಯಕ್ಷರಾದ ಶ್ರೀ ದಯಾನಂದ ಪೈ, ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾದ ಶ್ರೀ ವೆಂಕಪ್ಪಯ್ಯ ಕಾರ್ಯದರ್ಶಿ ಶ್ರೀ ಪ್ರವೀಣ್ ರೈ , ಸಹಕಾರ ಭಾರತಿ ಜಿಲ್ಲಾ ಹಾಲು ಪ್ರಾಕೋಸ್ಟದ ಸಂಚಾಲಕ ಶ್ರೀ ಪದ್ಮನಾಭ ಶೆಟ್ಟಿ ಅರ್ಕಜೆ ಮೊದಲಾದವರು ಉಪಸ್ಥಿತರಿದ್ದರು.
ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕಿ ವಿಜಯ ಪ್ರಕಾಶ್ ಸಹಕಾರ ಗೀತೆ ಹಾಡಿದರು. ಶ್ರೀಮತಿ ಧರ್ಮಾವತಿ ವಿಟ್ಲ ಸ್ವಾಗತಿಸಿ, ಶ್ರೀಮತಿ ಶೋಭಾ ನಲ್ಲೂರಾಯ ವಂದಿಸಿದರು. ಶ್ರೀಮತಿ ಧನ್ಯ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.





