ಕಲ್ಲಡ್ಕ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ ಇಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಏಪ್ರಿಲ್ 11ನೇ ಶನಿವಾರ ಸಾಯಂಕಾಲ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ವಹಿಸಿದ್ದರು.
ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಉದ್ಘಾಟಿಸಿ ಮಾತನಾಡಿ ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿತ್ತು ಇಂತಹ ಸಂದರ್ಭದಲ್ಲಿ ಕೇವಲ 22 ಕಿರಿಯ ಪ್ರಾಥಮಿಕ ಮಕ್ಕಳಿಗೆ ತರಬೇತಿ ನೀಡಿ ಯಕ್ಷಗಾನ ದಂತ ಕಲೆಯನ್ನು ಪ್ರದರ್ಶಿಸಿದ ಶಾಲಾ ಮುಖ್ಯ ಶಿಕ್ಷಕಿ ಚೇತನ ಕುಮಾರಿಯವರ ಕಲಾ ಆಸಕ್ತಿ ಮೆಚ್ಚುವಂತದ್ದಾಗಿತ್ತು ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿ ಇರಬೇಕೆಂದು ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಕರ ಸಂಘದ ಪದಾಧಿಕಾರಿ ಸಂದೇಶ್ ಎಂ ಎಸ್ ದಿಕ್ಸೂಚಿ ಭಾಷಣ ಮಾಡಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಓದುವ ಕೋಣೆ ಸೃಷ್ಟಿಮಾಡಿ, ಮಕ್ಕಳಲ್ಲಿ ದಿನಚರಿ ಮಾಡಿಸಿ ಹಾಗೂ ಶಾಲೆ ಹಾಗೂ ಶಿಕ್ಷಕರ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡು ಪ್ರತಿ ಮಗುವಿನ ಬೆಳವಣಿಗೆಯಲ್ಲಿ ಕಾರಣರಾಗಿರಿ ಎಂದರು.
ಸಭಾ ಕಾರ್ಯಕ್ರಮದ ಮೊದಲು ಶ್ರೀ ಉಲ್ಲಾಳ್ತಿ ಭಜನಾ ಮಂಡಳಿ ಕಾಂಪ್ರಬೈಲು ಇವರಿಂದ ಭಜನಾ ಸಂಕೀರ್ತನೆ ಜರಗಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಿದ ಅಲೆತ್ತೂರು ನರಸಿಂಹ ಮಯ್ಯರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಲಿಕಾ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ, ಮಕ್ಕಳ ಪೋಷಕರಿಗೆ, ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.
ಶಾಲೆಗೆ ವಿಶೇಷ ರೀತಿಯಲ್ಲಿ ಸಹಕರಿಸಿದವರನ್ನು ಗುರುತಿಸಿ ಸ್ಮರಣೆಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕ ಜಾಗೃತ ಬಳಗ ನರಿ ಕೊಂಬು ಇದರ ಅಧ್ಯಕ್ಷ ಜಯಲಕ್ಷ್ಮಿ, ಊರಿನ ಹಿರಿಯರಾದ ಮೋಹನ ಸಫಲ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ,ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾದವ, ಮೊದಲಾದವರು ಪಸ್ಥಿತರಿದ್ದರು. ನಿರೀಕ್ಷಾ ಅಮೃತ ಪಾವನಿ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಚೇತನ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೋನಿಷ ವಂದಿಸಿದರು. ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು. , ಮಾಜಿ ಅಧ್ಯಕ್ಷ ರಾಜೇಶ್, ಮಾಜಿ ಪಂಚಾಯತ್ ಸದಸ್ಯ ರಾಜೇಶ್. ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರುಗಳು ಸಹಕರಿಸಿದರು.
ನಂತರ ,ಮಕ್ಕಳಿಂದ "ಶ್ರೀದೇವಿ ವೈಷ್ಣವಿ ಮಹಾತ್ಮೆ" ಯಕ್ಷಗಾನ ಹಾಗೂ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ, ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನ ಕೊಂಡಿತು.





