30 June 2026 |

ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ವೇಗ: ಗರ್ಭಗುಡಿಯ ತಡಂಗಲ್ ಉತ್ಖನನ ಕಾರ್ಯ ಯಶಸ್ವಿ

  • 29 Jun 2026 06:18:13 PM

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ, ಜೂನ್ 28ರಂದು (ಭಾನುವಾರ) ದೇವಸ್ಥಾನದ ಗರ್ಭಗುಡಿಯ ತಡಂಗಲ್ ಉತ್ಖನನ ಕಾರ್ಯವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸಮ್ಮುಖದಲ್ಲಿ ನಡೆಸಲಾಯಿತು.

ಈ ಕಾರ್ಯವನ್ನು ಕರಸೇವಕರ ಸಹಕಾರದೊಂದಿಗೆ ಹಾಗೂ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ಯಶಸ್ವಿಯಾಗಿ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಸುಮಾರು 400ಕ್ಕೂ ಅಧಿಕ ಭಕ್ತರು ಮತ್ತು ಕರಸೇವಕರು ಭಾಗವಹಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಿದರು.

 

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಹಂತ ಹಂತವಾಗಿ ಮುಂದುವರಿಯುತ್ತಿದ್ದು, ಭಕ್ತರು ಮತ್ತು ಸಾರ್ವಜನಿಕರು ನೀಡುತ್ತಿರುವ ಸಹಕಾರಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ. ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇವಾಕಾರ್ಯಗಳಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.