ಕಲ್ಲಡ್ಕ: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಮಾರ್ಗದರ್ಶಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ, ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಶ್ರೀಮಾನ್, ಆಡಳಿತ ಮಂಡಳಿಯ ಸದಸ್ಯರು, ವಿವಿಧ ವಿಭಾಗಗಳ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮಾತೃಭಾರತಿಯ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಶ್ರೀಮಾನ್ ಮಾತಾಜಿಯವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾಕೇಂದ್ರದ ಆವರಣದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ವಾತಾವರಣ ಮೂಡಿತ್ತು.





