18 August 2026 |

ಕುದ್ರೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

  • 18 Aug 2026 01:33:27 PM

ಕಲ್ಲಡ್ಕ: ಕುದ್ರೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15, 2026ರಂದು ಶನಿವಾರದಂದು ಸಂಭ್ರಮದಿಂದ ಆಚರಿಸಲಾಯಿತು.

 

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಂದರ ಸಾಲಿಯಾನ್ ಪಥಸಂಚಲನಕ್ಕೆ ಚಾಲನೆ ನೀಡಿದರು. ಬಳಿಕ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಥಸಂಚಲನ ನಡೆಯಿತು.

 

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಉಷಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವರಾಜ್, ವಿಕ್ರಂ (MRPL), ಶೌರ್ಯ ವಿಪತ್ತು ತಂಡ ಕಲ್ಲಡ್ಕದ ಅಧ್ಯಕ್ಷರಾದ ಮಾಧವ ಸಾಲಿಯಾನ್, ಅಂಗನವಾಡಿ ಶಿಕ್ಷಕಿ ಸುರೇಖಾ, ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಜಯಶ್ರೀ, ಯುವ ವಾಹಿನಿ ಮಾಣಿಯ ನಾಗೇಶ್, ಚಂದ್ರ ಬಿ., ಸುಂದರ ಪಾದೆ, ಶೀನ ನಾಯ್ಕ ಹಾಗೂ ಕೃಷ್ಣಪ್ಪ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಬಿ. ಅವರು ಸ್ವಾಗತಿಸಿದರು. ಸಹ ಶಿಕ್ಷಕಿ ವಿಶಾಲಾಕ್ಷಿ ಅವರು ವಂದಿಸಿದರು. ಅತಿಥಿ ಶಿಕ್ಷಕಿ ಅಮಿತಾ ಅವರು ಕಾರ್ಯಕ್ರಮ ನಿರೂಪಿಸಿದರು.

 

ಸುಮಿತ್ರ, ಅತಿಥಿ ಶಿಕ್ಷಕಿ ಅಮಿತಾ, ಗೌರವ ಶಿಕ್ಷಕಿ ಪ್ರೇಕ್ಷಾ, ಅಂಗನವಾಡಿ ಸಹಾಯಕಿ ಜಯಂತಿ, ಶಾಲಾ ಸಹಾಯಕಿ ಶುಭ, ಅಡುಗೆ ಸಿಬ್ಬಂದಿಗಳಾದ ಪ್ರೇಮ ಹಾಗೂ ಹೇಮಾವತಿ ಅವರು ಕಾರ್ಯಕ್ರಮಕ್ಕೆ ಸಹಕರಿಸಿದರು.

 

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಎಲ್ಲಾ ಸದಸ್ಯರು, ಪೋಷಕರು ಹಾಗೂ ಊರಿನ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿಹಿ ಊಟದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.