ಬಂಟ್ವಾಳ, ಕಡೇಶಿವಾಲಯ: ದ ಕ ಜಿ ಪಂ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ ದಿನಾಂಕ 11.07.2025 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡ ಪೆರ್ನೆ ವಲಯ, ಇವುಗಳ ಸಹಭಾಗಿತ್ವದಲ್ಲಿ "ಪರಿಸರ ಜಾಗೃತಿ ಕಾರ್ಯಕ್ರಮ" ಮತ್ತು "ಗಿಡನಾಟಿ ಕಾರ್ಯಕ್ರಮ" ನಡೆಯಿತು.
ಕೆಮ್ಮಾನುಪಲ್ಕೆ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀ ಉದಯಕುಮಾರ್ ಇವರು ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಒಕ್ಕೂಟಗಳ ಮೇಲ್ವಿಚಾರಕಿ ಶ್ರೀಮತಿ ಶಾರದ, ಸೇವಾ ಪ್ರತಿನಿಧಿ ಶ್ರೀಮತಿ ಸುಚಿತ್ರ ಆಳ್ವ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶೋಭಾ, ಶೌರ್ಯ ವಿಪತ್ತು ನಿರ್ವಹಣಾ ತಂಡ ಪೆರ್ನೆ ಘಟಕದ ನಾಯಕ ಶ್ರೀ ಸುರೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಶ್ರೀಮತಿ ಸೀಮಾ ಹೆಚ್ ಇವರು ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು. ಒಕ್ಕೂಟಗಳ ವಲಯ ಮೇಲ್ವಿಚಾರಕರಕಿ ಶ್ರೀಮತಿ ಶಾರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶಿಕ್ಷಣಕ್ಕಿರುವ ವಿವಿಧ ಸೌಲಭ್ಯಗಳ ಕುರಿತು ತಿಳಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶೌರ್ಯ ತಂಡದ ಸದಸ್ಯರು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಒಂದು ಅರ್ಥಪೂರ್ಣ ಕಾರ್ಯಕ್ರಮವಾಗಿ ಮಾಡಲಾಯಿತು. ಸಭಾ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸುಚಿತ್ರ ಆಳ್ವ ಸ್ವಾಗತಿಸಿ, ಶಿಕ್ಷಕಿ ಸಂಧ್ಯಾ ಬಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಖುಷಿ ಮತ್ತು ಮೌಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.