ಬಂಟ್ವಾಳ: ದಿನಾಂಕ 19ನೇ ಆಗಸ್ಟ್ 2025 ರ ಮಂಗಳವಾರದಂದು ಪೂರ್ವಹ್ನ.10.30 ಗಂಟೆಗೆ ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ಮಹಾಸಭೆಯು ನಡೆಯಿತು.
ಪಂಚಾಯತ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋಧ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಂಧ್ಯಾ,ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರಂಜಿನಿ, ತಾಲೂಕು ಸಂಜೀವಿನಿ ವ್ಯವಸ್ಥಾಪಕರು ಶ್ರೀಮತಿ ಸುಧಾ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಲ್ಲಿಕ N. M, ಕು.ಹಿರಣ್ಮಯಿ, ಶ್ರೀಮತಿ ಹರಿಣಾಕ್ಷಿ, ಶ್ರೀ ವಿಠಲ, ಶ್ರೀ ಆನಂದ ಶೆಟ್ಟಿ ಕೆ, ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ, ತಾಲೂಕು ಪಂಚಾಯತ್ ನ ಮಾಜಿ ಸದಸ್ಯರು ಲಕ್ಷ್ಮಿ ಗೋಪಾಲ್ ಆಚಾರ್ಯ ಉಪಸ್ಥಿತರಿದ್ದರು.
ಗಣೇಶ ಸ್ತುತಿ ಯೊಂದಿಗೆ ಸ್ವ-ಸಹಾಯ ಸಂಘದ ಧ್ಯೇಯಗೀತೆಯೊಂದಿಗೆ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು. ಕಲ್ಪವೃಕ್ಷ ಸಂಜೀವಿನಿ ಒಕ್ಕೂಟ ದ MBK ಜಯಶ್ರೀ ಇವರು ಒಕ್ಕೂಟದ ವಾರ್ಷಿಕ ವರದಿ ಮಂಡನೆ ಮಾಡಿದರು. ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಚೈತ್ರ ರವರು 2024-25 ರ ಜಮಾ ಖರ್ಚಿನ ಲೆಕ್ಕ ಪರಿಶೋಧನೆ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಸಂಜೀವಿನಿ ವ್ಯವಸ್ಥಾಪಕರಾದ ಶ್ರೀಮತಿ ಸುಧಾ ಇವರು ಈ ಕಾರ್ಯಕ್ರಮದ ಯೋಜನೆಯ ಹಿನ್ನಲೆಯ ಉದ್ದೇಶವನ್ನು ವಿವರಿಸಿದರು. ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಪರಿವರ್ತನ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಕರ್ನಾಟಕದ ಪ್ರತಿಜ್ಞೆಯನ್ನು ಮಾಡಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಘನತ್ಯಾಜ್ಯ ಘಟಕದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು. ಪಂಚಾಯತ್ ಅಧ್ಯಕ್ಷರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಸಖಿ ಗುಲಾಬಿ ಸ್ವಾಗತಿಸಿ, L.C.R.P ಶ್ರೀಮತಿ ನಯನರವರು ಧನ್ಯವಾದ ಕೊಟ್ಟು ಕಾರ್ಯಕ್ರಮ ನಿರೂಪಿಸಿದರು.