ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಕಡೇಶಿವಾಲಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಾಳೆ ದಿನಾಂಕ 27 ಆಗಸ್ಟ್ 2025 ರಂದು ಬುಧವಾರ ಕಡೇಶಿವಾಲಯ ದೇವಸ್ಥಾನದಲ್ಲಿ ನೆರವೇರಲಿದೆ.
ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಇನ್ನಿತರ ಕಾರ್ಯಕ್ರಮಕ್ಕೆ ಎಲ್ಲಾ ಭಕ್ತಾದಿಗಳು ಆಗಮಿಸಿ, ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ದೇವದಾಸ ಪೂಜಾರಿ ಪಚ್ಚಡಿಬೈಲು, ಕಾರ್ಯದರ್ಶಿ ಶಿವಾನಂದ ಭಂಡಾರಿಬೆಟ್ಟು, ಶ್ರೀ ಕ್ಷೇತ್ರ ಕಡೇಶಿವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಶೆಟ್ಟಿ ನುಳಿಯಾಲು ಹಾಗೂ ಅರ್ಚಕ ವೃಂದ, ಸಿಬ್ಬಂದಿ ವರ್ಗ ಬೇಡಿಕೊಂಡಿದ್ದಾರೆ.