22 October 2025 | Join group

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ 20ನೇ ವಾರ್ಷಿಕೋತ್ಸವ ನಡೆಯಿತು

  • 13 Oct 2025 09:46:50 AM

ಕಲ್ಲಡ್ಕ : "ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿಸಿ ನವ ಭಾರತದ ನಿರ್ಮಾಣದ ಅಡಿಪಾಯವಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಜನರು ತಮ್ಮ ಬದುಕು ಕಟ್ಟಿಕೊಂಡು ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ತೆಗೆದ ಸಾಲವನ್ನು ಸೂಕ್ತವಾಗಿ ವಿನಿಯೋಗಿಸಿಕೊಂಡು ಪ್ರಾಮಾಣಿಕವಾಗಿ ಕಟ್ಟಿ ಯೋಜನೆಯ ಯಶಸ್ವಿಗೆ ನಾವು ಕಾರಣರಾಗಬೇಕು" ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

 

ಅವರು ಭಾನುವಾರ ಬೋಳಂತೂರು ಹಾಲು ಉತ್ಪಾದಕರ ಸಂಘದ ಸಭಾಭವನದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳ ಬೋಳಂತೂರು ಒಕ್ಕೂಟದ 20 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸೀತಾ ರಾಮಚಂದ್ರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಗೌರವ ಅಧ್ಯಕ್ಷರಾದ ಮಹಾಬಲ ರೈ ಮಾಡಿದರು.

 

ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಯೋಜನೆ ಬಂಟ್ವಾಳ ತಾಲೂಕಿನಲ್ಲಿ ಪ್ರಾರಂಭವಾಗಿ 20 ವರ್ಷಗಳಲ್ಲಿ ಮಾಡಿದ ಕಾರ್ಯ ಸಾಧನೆ ಹಾಗೂ ಯೋಜನೆ ಮೂಲಕ ಸಮುದಾಯಕ್ಕೆ ನೀಡಿದ ಸಹಕಾರವನ್ನು ಸದಸ್ಯರುಗಳಿಗೆ ಮತ್ತೊಮ್ಮೆ ನೆನಪಿಸಿದರು. ಈ ಸಂದರ್ಭದಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿರುವ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳನ್ನು ಗುರುತಿಸಿ ಗೌರವಿಸಿ ಪರಿಸರ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರತಿಯೊಬ್ಬರಿಗೂ ಹೂವಿನ ಸಸಿ ವಿತರಿಸಲಾಯಿತು.

ಸಭಾ ಕಾರ್ಯಕ್ರಮದ ಮೊದಲು ಭಜನಾ ಸಂಕೀರ್ತನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಾಲಿನಿ, ಬೋಳಂತೂರು ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರೈ ನಾರ್ಶ್, ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಯೋಜನೆಯ ಕಲ್ಲಡ್ಕ ವಲಯ ಅದ್ಯೇಕ್ಷೆ ತುಳಸಿ, ಕೆ ಎಂ ಎಫ್ ನಿರ್ದೇಶಕರಾದ ಸುಧಾಕರ ರೈ ಬೋಳಂತೂರು, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಸಿದ್ಧಿ ವಿನಾಯಕ ಭಜನಾ ಮಂದಿರದ ಅಧ್ಯಕ್ಷ ಮುತ್ತಪ್ಪ ಮೂಲ್ಯ, ಕುಶಲಕರ್ಮಿ ರಾಮಚಂದ್ರ ಆಚಾರ್ಯ, ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತರು ಒಕ್ಕೂಟ ಮಾಜಿ ಅಧ್ಯಕ್ಷ ಚೆನ್ನಪ್ಪ ಪೂಜಾರಿ ಗುಂಡಿಮಜಲು ಉಪಸ್ಥಿತರಿದ್ದರು.

 

ಶ್ರೀ ಶಾರದಾಂಬ ಭಜನಾ ಮಂದಿರ ಗುಂಡಿಮಜಲ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಬೋಳಂತೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹರೀಶ್, ಸದಾಶಿವ ನಾರ್ಶ್, ಬೋಳಂತೂರು ಅಂಚೆ ಮಾಸ್ಟರ್ ಜಯರಾಜ್ ಬೀರುಕೋಡಿ, ಮಾಜಿ ಒಳ್ಳೆಯ ಅಧ್ಯಕ್ಷರಾದ ಇಂತ್ರು ಮಾಸ್ಕರೇಸ್, ಗೋಳ್ತಮಜಲ್ ಎ ಒಕ್ಕೂಟದ ಅಧ್ಯಕ್ಷ ಮಮತಾ, ಮಾಮೇಶ್ವರ ಒಕ್ಕೂಟ ಅಧ್ಯಕ್ಷ ಹರೀಶ್ ವಿ ಮಾಡ, ಕೆಲಿಂಜ ಒಕ್ಕೂಟದ ಅಧ್ಯಕ್ಷ ದಯಾನಂದ ಗೌಡ, ವೀರಕಂಬ ಒಕ್ಕೂಟ ಅಧ್ಯಕ್ಷೆ ಶಾಂಭವಿ ಆಚಾರ್ಯ, ಗೋಳ್ತಮಜಲು ಒಕ್ಕೂಟ ಅಧ್ಯಕ್ಷ ಸೀತಾರಾಮ್ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳಾದ, ಸುಧಾ ಮಣಿ ಪುಷ್ಪ ಬಿ ಶೆಟ್ಟಿ ಜಯಶ್ರೀ ಪುರುಷೋತ್ತಮ, ಸೇವಾ ಪ್ರತಿನಿಧಿಗಳಾದ ಗಣೇಶ್, ವಿದ್ಯಾ, ವಿಜಯ, ಸುಕನ್ಯ, ರೇವತಿ, ಯಶೋದ, ಮೊದಲಾದವರು ಕೂಡ ಉಪಸ್ಥಿತರಿದ್ದರು.

 

ಒಕ್ಕೂಟದ ಅಧ್ಯಕ್ಷ ಶ್ರೀಮತಿ ಸೀತಾ ರಾಮಚಂದ್ರ ಆಚಾರ್ಯ ತನ್ನ ಜೊತೆ ಕಾರ್ಯನಿರ್ವಹಿಸಿದ ಒಕ್ಕೂಟದ ಎಲ್ಲಾ ಸದಸ್ಯರುಗಳಿಗೆ ಗಿಫ್ಟ್ ನೀಡಿ ಗೌರವಿಸಿದರು. ಕಲ್ಲಡ್ಕ ವಲಯ ಮೇಲ್ವಿಚಾರಕ ಸುಕರಾಜ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಲೀಲಾವತಿ ವರದಿ ವಾಚಿಸಿ, ಒಕ್ಕೂಟ ಕಾರ್ಯದರ್ಶಿ ಚಂದ್ರಕಲಾ ವಂದಿಸಿದರು. ಮಮತಾ ಕಾರ್ಯಕ್ರಮ ನಿರಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.