24 June 2026 |

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1,600 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ; ಜುಲೈ 22ರೊಳಗೆ ಅರ್ಜಿ ಸಲ್ಲಿಸಿ

  • 23 Jun 2026 11:47:30 AM

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ದೊರಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

 

ಒಟ್ಟು 1,600 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜುಲೈ 22ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ನೇಮಕಾತಿಯಲ್ಲಿ ಮಿಕ್ಕುಳಿದ ವೃಂದದ 1,421 ಹುದ್ದೆಗಳು ಹಾಗೂ ಸ್ಥಳೀಯ ವೃಂದದ 179 ಹುದ್ದೆಗಳು ಸೇರಿವೆ. ಈ ಎರಡೂ ವಿಭಾಗಗಳಿಗೆ ಪ್ರತ್ಯೇಕ ಅರ್ಜಿ ಪ್ರಕ್ರಿಯೆ ಜಾರಿಯಲ್ಲಿದ್ದು, ಅಭ್ಯರ್ಥಿಗಳು ಸಂಬಂಧಿತ ಅಧಿಸೂಚನೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

 

ಅಭ್ಯರ್ಥಿಗಳ ಆಯ್ಕೆಗಾಗಿ ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಶೈಕ್ಷಣಿಕ ಅರ್ಹತೆ, ವಯೋಮಿತಿ, ಮೀಸಲಾತಿ, ದೈಹಿಕ ಅರ್ಹತೆ ಸೇರಿದಂತೆ ಎಲ್ಲಾ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿಕೊಳ್ಳುವುದು ಸೂಕ್ತ.