ಮಂಗಳೂರು: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಹಾಗೂ ಢಾಕ್ ಸೇವಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳ ಒಂದು ಬಾರಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಆ. 30ರಿಂದ ಸೆ. 19ರವರೆಗೆ ನಡೆಯಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಸೆ. 2ರಿಂದ 21ರವರೆಗೆ ಅವಕಾಶವಿದೆ. ಆಸಕ್ತರು https://indiapost.gov.in/gdsonlineengagement ಮೂಲಕ ಅರ್ಜಿ ಸಲ್ಲಿಸಬಹುದು.
ಮಂಗಳೂರು ವಿಭಾಗದಲ್ಲಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರುವುದು ಅಗತ್ಯವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಓದಿರುವ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ https://indiapostodsonline.gov.in ಅಥವಾ ವಿಭಾಗೀಯ ಕಚೇರಿ, ಬಲ್ಮಠವನ್ನು ಸಂಪರ್ಕಿಸಬಹುದು ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.





