ಕರ್ನಾಟಕ ಆಹಾರ ಇಲಾಖೆ ರೇಷನ್ ಕಾರ್ಡ್‌ದಾರರಿಗೆ ಆಧಾರ್ ಆಧಾರಿತ e-KYC ಪ್ರಕ್ರಿಯೆಯನ್ನು ಸುಲಭಗೊಳಿಸಲು ‘ಅನ್ನಸೇವೆ’ ಎಂಬ ಮೊಬೈಲ್ ಆ್ಯಪ್‌ನ್ನು ಪರಿಚಯಿಸಿದೆ.
ಈ ಸೌಲಭ್ಯವನ್ನು ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆರಂಭಿಸಲಾಗಿದೆ.
ಸೆಪ್ಟೆಂಬರ್ 29ರ ವೇಳೆಗೆ ರಾಜ್ಯದಲ್ಲಿ 1.56 ಕೋಟಿಗೂ ಹೆಚ್ಚು ಫಲಾನುಭವಿಗಳು ತಮ್ಮ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಉಳಿದ ಜಿಲ್ಲೆಗಳಿಗೂ ಈ ಆ್ಯಪ್ ಸೌಲಭ್ಯವನ್ನು ಅಕ್ಟೋಬರ್ 10ರಿಂದ ಹಂತ ಹಂತವಾಗಿ ವಿಸ್ತರಿಸಲು ಇಲಾಖೆ ಕ್ರಮ ಕೈಗೊಂಡಿದೆ.
ಇದೇ ವೇಳೆ ರೇಷನ್ ಕಾರ್ಡ್ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.





