ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಘಾತ ದೇಶಾದ್ಯಂತ ಹೆಚ್ಚುತ್ತಿರುವ ಸಂದರ್ಭದಲ್ಲಿ, ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಆದ್ದರಿಂದ, ಯುವಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಗತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ, ಇದರ ಕುರಿತು ಶಾಲಾ-ಕಾಲೇಜುಗಳು ವಿಶ್ವವಿದ್ಯಾಲಯ ಹಾಗೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸೂಚಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಅರೋಗ್ಯ ಸಚಿವರು ಕೂಡ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಗಮನಹರಿಸಿ ಪರಿಶೀಲನೆ ಮಾಡಿ ಎಂದು ವೈದ್ಯರುಗಳಿಗೆ ಸೂಚಿಸಿದ್ದಾರೆ.