ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ.
ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಲ್ಲಿ ತಕ್ಷಣವೇ 1930ಕ್ಕೆ ಕರೆಮಾಡಿ ಅಥವಾ cybercrime.gov.in ಇಲ್ಲಿ ದೂರು ದಾಖಲಿಸಿ ಎಂದು ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.