ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಇ-ಬಸ್ ಯೋಜನೆಯಡಿಯಲ್ಲಿ ಮಂಗಳೂರಿಗೆ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮುಡಿಪು ಕಂಬಳಪದವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಯುಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ಮಂಗಳೂರು ಸೇರಿದಂತೆ ಕರ್ನಾಟಕದ 10 ನಗರಗಳಿಗೆ ತಲಾ 100 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಬಸ್‌ಗಳ ನಿರ್ವಹಣೆಗೆ ಸೂಕ್ತ ಜಾಗ, ಚಾರ್ಜಿಂಗ್ ಸ್ಟೇಷನ್, ಬಸ್ ಡಿಪೋ ಮುಂತಾದ ಮೂಲಸೌಕರ್ಯ ಅಗತ್ಯವಿದ್ದು, ಮಂಗಳೂರಿನಲ್ಲಿ ಕೂಡಲೇ ಜಾಗ ಗುರುತಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತ ಮತ್ತು ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ.
ಇದರೊಂದಿಗೆ ಕೇಂದ್ರ ಸರ್ಕಾರ, ನಗರಾಭಿವೃದ್ಧಿ ಸಚಿವರು ಹಾಗೂ ಪ್ರಧಾನಮಂತ್ರಿ ಮೋದಿ ಅವರಿಗೆ ಜನರ ಪರವಾಗಿ ಧನ್ಯವಾದ ಸಲ್ಲಿಸಿದರು.