ಶ್ರಾವಣ ಮಾಸಕ್ಕೆ ಚಿನ್ನ ಖರೀದಿ ಮಾಡುವ ಯೋಜನೆ ಹಾಕಿಕೊಂಡಿದ್ದವರಿಗೆ ಚಿನ್ನ ಬೆಲೆ ಏರಿಕೆ ಶಾಕ್ ನೀಡಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗಲೇ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,00,000 ದಾಟಿದ್ದು, 22 ಕ್ಯಾರಟ್ ಚಿನ್ನ 10 ಗ್ರಾಂಗೆ ₹90,000 ಗಿಂತ ಹೆಚ್ಚು ಬೆಲೆಯಾಗಿದೆ.
ಅಮೆರಿಕಾ ಮತ್ತು ಯೂರೋಪ್ ರಾಷ್ಟ್ರಗಳ ನಡುವಿನ ವ್ಯಾಪಾರ ಒಪ್ಪಂದಗಳು ಇನ್ನೂ ನಿರ್ಣಾಯಕ ಹಂತ ತಲುಪದೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಉಂಟಾಗಿದೆ. ಇದರ ನೇರ ಪರಿಣಾಮ ಚಿನ್ನದ ಮೇಲೆಯೂ ಬಿದ್ದಿದೆ.
ಇದರ ಜೊತೆಗೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯೆಂದು ಬಿಂಬಿಸುತ್ತಿದ್ದು, ಹೆಚ್ಚಿನ ಬಂಡವಾಳವನ್ನು ಚಿನ್ನದ ಕಡೆಗೆ ತಿರುಗಿಸುತ್ತಿದ್ದಾರೆ. ಇದೂ ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.