17 September 2025 | Join group

ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

  • 16 Sep 2025 07:49:51 PM

ಪಪ್ಪಾಯಿ ಉತ್ತಮ ರುಚಿಯನ್ನು ಹೊಂದಿರುವುದು ಮಾತ್ರವಲ್ಲದೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡಬಹುದು. ಆದರಲ್ಲೂ ಪಪ್ಪಾಯಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬಹುದು ತುಂಬಾ ಉತ್ತಮ ಎಂದು ನಿಮಗೆ ತಿಳಿದಿದೆಯೇ? ಹೌದು, ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ.

 

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಗುಣಪಡಿಸಬಹುದು. ಪಪ್ಪಾಯಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ನಿಯಾಸಿನ್, ಮೆಗ್ನೀಸಿಯಮ್, ಕ್ಯಾರೋಟಿನ್, ಫೈಬರ್, ಫೋಲೇಟ್, ಪೊಟ್ಯಾಸಿಯಮ್, ತಾಮ್ರ, ಕ್ಯಾಲ್ಸಿಯಂ ಅಂಶಗಳು ಸಹ ಇವೆ. ಇದು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ.

 

ಪಪ್ಪಾಯಿ ಹಣ್ಣಿನ ಆರೋಗ್ಯದ ಲಾಭಗಳು:

ಜೀರ್ಣಕ್ರಿಯೆ ಸುಧಾರಣೆ:

ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರಲ್ಲಿರುವ ಪಪೈನ್ ಎಂಬ ಕಿಣ್ವವು ಜೀರ್ಣಕಾರಿ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

 

ಹೃದಯದ ಆರೋಗ್ಯಕ್ಕೆ ಪೂರಕ:

ಪಪ್ಪಾಯಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಲೈಕೋಪೀನ್ ಹಾಗೂ ವಿಟಮಿನ್ ಸಿ ಅಧಿಕವಾಗಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೃದಯ ಕಾಯಿಲೆಯ ಅಪಾಯ ಕಡಿಮೆ ಮಾಡುತ್ತದೆ. ಇದರಲ್ಲಿರುವ ಫೈಬರ್ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುವಲ್ಲಿ ಉತ್ತಮವಾಗಿ ಕೆಲಸ ಮಾಡುತ್ತದೆ.

 

ಚರ್ಮಕ್ಕೆ ಪ್ರಯೋಜನಕಾರಿ:

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದು ಸಹ ಚರ್ಮಕ್ಕೆ ತುಂಬಾ ಒಳ್ಳೆಯದು. ಏಕೆಂದರೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ದೇಹದಲ್ಲಿರುವ ವಿಷವನ್ನು ತೆಗೆದುಹಾಕುತ್ತದೆ ಮತ್ತು ರಕ್ತವನ್ನು ಶುದ್ಧೀಕರಿಸುತ್ತದೆ. ಇದು ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ದೂರವಿಡುತ್ತದೆ ಮತ್ತು ಚರ್ಮವನ್ನು ಸುಧಾರಿಸುತ್ತದೆ.

 

ಋತುಚಕ್ರವು ನೋವಿಗೆ ಕೂಡ ಒಳ್ಳೆಯದು:

ಪಪ್ಪಾಯಿಯನ್ನು ಸೇವಿಸುವುದರಿಂದ ಮುಟ್ಟಿನ ನೋವು ಮತ್ತು ಹೊಟ್ಟೆ ಉಬ್ಬರ ಕಡಿಮೆಯಾಗುತ್ತದೆ. ಪಪ್ಪಾಯಿಯಲ್ಲಿ ಸಾಕಷ್ಟು ಉರಿಯೂತ ಶಮನಕಾರಿ ಗುಣಗಳಿವೆ, ಇದು ಮುಟ್ಟಿನ ನೋವು ಮತ್ತು ಹೊಟ್ಟೆ ಉಬ್ಬರವನ್ನು ಸುಲಭವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

 

ರೋಗನಿರೋಧಕ ಶಕ್ತಿ ಹೆಚ್ಚುತ್ತೆ:

ಪಪ್ಪಾಯಿ ಸೇವನೆಯಿಂದ ದೇಹಕ್ಕೆ ಜೀವಸತ್ವಗಳು, ಖನಿಜಗಳು ಹಾಗೂ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ದೊರೆಯುತ್ತವೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

 

ಈ ಎಲ್ಲಾ ಕಾರಣಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನೋದು ಉತ್ತಮ ಅನ್ನುತ್ತಾರೆ ಅರೋಗ್ಯ ತಜ್ಞರು. ಖಾಲಿ ಹೊಟ್ಟೆಯಲ್ಲಿ ಮಾತ್ರವಲ್ಲ, ಯಾವ ಸಮಯದಲ್ಲೂ ತಿಂದರು ಪಪ್ಪಾಯಿ ದೇಹಕ್ಕೆ ಉತ್ತಮವಾದ ಅರೋಗ್ಯ ನೀಡುವ ಹಣ್ಣುಗಳಲ್ಲಿ ಒಂದಾಗಿದೆ.