07 December 2025 | Join group

ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್

  • 10 Nov 2025 10:34:53 AM

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್ ಮಾಡಲಾಗಿದ್ದು, ವೀಡಿಯೋ ವೈರಲ್ ಆಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.

 

ವಿಡಿಯೋ ವ್ಯಾಪಕ ಟೀಕೆಗೆ ಕಾರಣವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.


ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೃತ್ಯಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ.

 

ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಅನುಮೋದನೆ ಪಡೆದ ಆರೋಪದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ.