2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮುಂದಿನ ವಾರದಲ್ಲಿ ಪ್ರಕಟ

  • 01 Apr 2025 01:50:44 PM

ಬೆಂಗಳೂರು : ಪಿಯುಸಿ ಪರೀಕ್ಷೆ ಮೌಲಮಾಪನ ಪ್ರಕ್ರಿಯೆ ಈ ವಾರದಲ್ಲಿ ಮುಕ್ತಾಯಗೊಳ್ಳಲಿದೆ. ಕರ್ನಾಟಕ ರಾಜ್ಯದಲ್ಲಿ ಕಳೆದ ತಿಂಗಳು ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದವು. ಇದೀಗ ಪರೀಕ್ಷಾ ಫಲಿತಾಂಶ ಮುಂದಿನ ವಾರ ದಿನ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಒಟ್ಟು 1171 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 2025 ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 6,61,474 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ, 34,071 ವಿದ್ಯಾರ್ಥಿಗಳು ಮರುಪರೀಕ್ಷೆ ಬರೆದಿದ್ದರು. ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ 18,317 ಖಾಸಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

 

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ವರ್ಷವೂ ಪ್ರತಿ ವರ್ಷದಂತೆ ಹೆಚ್ಚಿನ ಶೇಕಡಾವಾರು ಫಲಿತಾಂಶ ಬರಲಿದೆ ಎಂದು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.