08 December 2025 | Join group

ಗೋವಾ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 25 ಮಂದಿ ಸಾವು, 7 ಜನರ ಪರಿಸ್ಥಿತಿ ಗಂಭೀರ!

  • 07 Dec 2025 12:27:12 PM

ಗೋವಾ: ಶನಿವಾರ ಮಧ್ಯರಾತ್ರಿ ಉತ್ತರ ಗೋವಾದ ಅರ್ಪೋರಾದಲ್ಲಿರುವ ಜನಪ್ರಿಯ ಕ್ಲಬ್‌ನಲ್ಲಿ ನಡೆದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, 6 ಜನರ ಪರಿಸ್ಥಿತಿ ಗಂಭೀರವಾಗಿದೆ.

 

ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಲುವಾಗಿ ಡಿಸೆಂಬರ್ ಮಾಸದಲ್ಲಿ ಗೋವಾದ ಎಲ್ಲಾ ಪ್ರದೇಶಗಳು ಟೂರಿಸ್ಟ್ ಜನರಿಂದ ತುಂಬಿರುತ್ತದೆ. ಇದೇ ಸಂದರ್ಭದಲ್ಲಿ ರಾಜ್ಯದ ಅತ್ಯಂತ ಜನನಿಬಿಡ ಪ್ರವಾಸಿ ಕೇಂದ್ರಗಳಲ್ಲಿ ಒಂದಾದ ಬಾಗಾ ಬೀಚ್ ಬಳಿ ಇರುವ ಬಿರ್ಚ್ ಬೈ ರೋಮಿಯೋ ಲೇನ್ ಎಂಬ ನೈಟ್‌ಕ್ಲಬ್‌ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ.

 

ಅಡುಗೆಮನೆ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ಪೊಲೀಸ್ ವಿಚಾರಣೆಗಳು ಸೂಚಿಸುತ್ತವೆ. ಭಾನುವಾರ ಬೆಳಗಿನ ಜಾವದವರೆಗೂ ಹಲವಾರು ಠಾಣೆಗಳಿಂದ ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿದ್ದು, ಅಗ್ನಿಶಾಮಕ ದಳದವರು ತೀವ್ರ ಬೆಂಕಿ ಮತ್ತು ದಟ್ಟವಾದ ಹೊಗೆಯನ್ನು ನಂದಿಸುವಲ್ಲಿ ರಕ್ಷಣಾ ಕಾರ್ಯಗಳು ಮುಂದುವರೆದವು.

 

ಗೋವಾದ ಮುಖ್ಯಮಂತ್ರಿ ಮಧ್ಯರಾತ್ರಿ 2 ಗಂಟೆಗೆ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು, ಅತೀವ ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳದಿಂದಲೇ ತನಿಖೆಗೆ ಆದೇಶ ನೀಡಿದ್ದು, ತಪ್ಪಿತ್ಥಸ್ಥರ ವಿರುದ್ಧ ಕಠಿಣ ಕ್ರಮ ಮತ್ತು ಗೋವಾದ ಎಲ್ಲಾ ಕ್ಲಬ್ ಗಳ ಪರಿಶೀಲನೆ ನಡೆಸಲು ಆದೇಶಿಸಿದ್ದಾರೆ. ಕ್ಲಬ್ ನಡೆಸುವವರು ಸರಿಯಾದ ಮಾನದಂಡಗಳನ್ನು ಅನುಸರಿಸದಿದ್ದರೆ, ಅಂತಹ ಕ್ಲಬ್ ಗಳನ್ನು ತಕ್ಷಣ ಮುಚ್ಚುವುದರ ಜೊತೆಗೆ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

 

ಪ್ರಧಾನಿ ನರೇಂದ್ರ ಮೋದಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. 'ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ರಾಜ್ಯಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ' ಎಂದು ಅವರು ಹೇಳಿದರು.

 

ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಬೆಂಕಿ ಅವಘಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಡುಗೆ ಮನೆಯಲ್ಲಿ ಕೆಲಸ ಮಾಡುವವರಾಗಿದ್ದು, 3 ಮಹಿಳೆಯರು ಕೂಡ ಸೇರಿದ್ದಾರೆ.

 

ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಪ್ರಾರಂಭವಾಯಿತು ಮತ್ತು ಅದನ್ನು ನಿಯಂತ್ರಣಕ್ಕೆ ತರಲಾಗಿದೆ. ಮೂಲ ಮತ್ತು ಕಾರಣವನ್ನು ಇನ್ನೂ ತನಿಖೆ ಮಾಡಲಾಗುತ್ತಿದೆ. ಹೆಚ್ಚಿನ ಶವಗಳನ್ನು ಅಡುಗೆಮನೆ ಪ್ರದೇಶದಿಂದ ಮತ್ತು ಎರಡು ಮೆಟ್ಟಿಲುಗಳಿಂದ ಹೊರತೆಗೆಯಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.