ಬೆಂಗಳೂರು: ನಗರದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕ್ಯೂಆರ್ ಕೋಡ್ ಆಧಾರಿತ ಮಾಹಿತಿ ಫಲಕಗಳನ್ನು ಸ್ಥಾಪಿಸಿದೆ.
ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ, ಇನ್ನು ಮುಂದೆ ರಸ್ತೆಗಳ ಕಾಮಗಾರಿಗೆ ಸಂಬಂಧಿಸಿದಂತೆ ಕಂಟ್ರಾಕ್ಟರ್‌ಗಳ ವಿವರ ಸೇರಿದಂತೆ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಲಭ್ಯವಾಗಲಿವೆ ಎಂದು ಘೋಷಿಸಿದ್ದರು.
ಅದರಂತೆ, ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಕುರಿತು ವಿವರವಾದ ಮಾಹಿತಿಯನ್ನು ಕ್ಯೂಆರ್ ಕೋಡ್ ಹೊಂದಿದ ಫಲಕಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗಿದೆ.

Image credit: X account/@IndianTechGuide





