BJP, April 04, 2025 : ಕಳೆದ ವಾರ ಕೇಂದ್ರದ ಗ್ರಹಮಂತ್ರಿ ಅಮಿತ್ ಶಾ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಯವರನ್ನು ಕರೆದು ನೀವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದಿದ್ದರು. ಅದೇ ಕಾರಣಕ್ಕಾಗಿ ಇಂದು ಅಣ್ಣಾಮಲೈ ಸುದ್ದಿಗೋಷ್ಠಿ ಮಾಡಿ ಮಹತ್ವದ ಸುಳಿವೊಂದನ್ನು ಕೊಟ್ಟಿದ್ದಾರೆ.
ಅಣ್ಣಾಮಲೈ ಮಾಧ್ಯಮಗಳಿಗೆ ಮಾತನಾಡುತ್ತ, ನಾನು ರಾಜ್ಯಾಧ್ಯಕ್ಷ ರೇಸ್ ನಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬಿಜೆಪಿ ಮತ್ತು ಎಐಎಡಿಎಂಕೆ ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಕದನಕ್ಕೆ ಇಳಿಯಲಿದ್ದು, ಅಣ್ಣಾಮಲೈ ರಾಜೀನಾಮೆ ಹಿಂದೆ ಬಲವಾದ ಕಾರಣಗಳಿವೆ.
ಮುಂದಿನ ಎರಡು ವಾರದಲ್ಲಿ ಹೊಸ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ ಮತ್ತು ಬಿಜೆಪಿಯ ಕಾರ್ಯಕರ್ತರೊಲ್ಲೊಬ್ಬರು ಅಧ್ಯಕ್ಷರಾಗಲಿದ್ದಾರೆ ಎಂದು ಅಣ್ಣಾಮಲೈ ಘೋಷಣೆ ಮಾಡಿದ್ದಾರೆ. ನಾನು ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ 2021ರಿಂದ ಕೆಲಸ ಮಾಡಿದ್ದ ಅಣ್ಣಾಮಲೈ, ತಮಿಳುನಾಡಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಲು ಬಹಳ ಪ್ರಯತ್ನಪಟ್ಟಿದ್ದಾರೆ. 2024 ರ ಚುನಾವಣೆಯಲ್ಲಿ NDA ಮೈತ್ರಿಗೆ 18.28% ಮತ ಚಲಾವಣೆಯಾಗಿತ್ತು.
ಅಣ್ಣಾಮಲೈ ಕೈ ಬಿಟ್ಟರೆ ಮೈತ್ರಿಗೆ ಸಿದ್ಧ ಎಂದಿತ್ತಂತೆ ಎಐಎಡಿಎಂಕೆ ಆದ್ದರಿಂದ ಎಐಎಡಿಎಂಕೆ ಮೈತ್ರಿಗಾಗಿ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಈ ವಿಚಾರವಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಅಣ್ಣಾಮಲೈಯವರು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ತನ್ನ ಸೇವೆಗೆ ರಾಜೀನಾಮೆ ಕೊಟ್ಟು ಆಗಸ್ಟ್ 2020 ರಂದು ಬಿಜೆಪಿ ಪಕ್ಷಕ್ಕೆ ಸೇರಿದ್ದರು ಮತ್ತು 2021ರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.