ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವರೆಗಿನ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ?

  • 08 Apr 2026 12:57:45 AM

ಬೆಂಗಳೂರು: ಶಾಲಾ ಮಕ್ಕಳ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಖಾತ್ರಿಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ನಡೆಸಿದೆ. ಈಗಾಗಲೇ ವಿವಿಧ ವಿದ್ಯಾರ್ಥಿ ರಿಯಾಯಿತಿಗಳು ಜಾರಿಯಲ್ಲಿರುವ ಹಿನ್ನೆಲೆ, ದ್ವಿತೀಯ ಪಿಯುಸಿ ವರೆಗಿನ ಗಂಡು ವಿದ್ಯಾರ್ಥಿಗಳಿಗೆ ಸಹ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ.

 

ಸರ್ಕಾರದ ಪ್ರಾಥಮಿಕ ಯೋಜನೆಯಂತೆ, ಈ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ರಾಜ್ಯ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಜಾರಿಗೆ ತರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ನಿಗಮಗಳಿಗೆ ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ.

 

ಈ ಯೋಜನೆ ಜಾರಿಗೆ ಬಂದರೆ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜುಗಳಿಗೆ ಪ್ರಯಾಣಿಸುವಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ, ಪೋಷಕರ ಆರ್ಥಿಕ ಭಾರವೂ ಕಡಿಮೆಯಾಗುವ ನಿರೀಕ್ಷೆಯಿದೆ. ಇದಕ್ಕೆ ಸಂಬಂಧಿಸಿದ ಅಂತಿಮ ಆದೇಶ ಹೊರಬಿದ್ದ ನಂತರವೇ ಯೋಜನೆಯ ಸ್ಪಷ್ಟ ಮಾರ್ಗಸೂಚಿಗಳು ಪ್ರಕಟವಾಗಲಿವೆ.