ಧರ್ಮಸ್ಥಳ : ಸೌಜನ್ಯ ಕೊ*ಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾದ ಪ್ರತಿಭಟನೆ ಹೈ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ನಾಳೆ ನಡೆಯಬೇಕಾಗಿದ್ದ ಪ್ರತಿಭಟನೆಗೆ ತಯಾರಿ ನಡೆಸುತ್ತಿದ್ದ ಸಂಘ ಸಂಘಟನೆಗಳ ಆಕ್ರೋಶಕ್ಕೆ ಕೂಡ ಗುರಿಯಾಗಿದೆ.
ನಾಳೆ ನಡೆಯಬೇಕಾಗಿದ್ದ ಪ್ರತಿಭಟನೆಗೆ ತಡೆಯೊಡ್ಡಬೇಕು ಎಂದು ಧನಕೀರ್ತಿ ಆರಿಗ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆ ನಡೆಯುವವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆಯನ್ನು ನೀಡಿ ಆದೇಶಿಸಿದೆ.
ಪ್ರತಿಭಟನೆಗೆ ಸಂಬಂಧಿಸಿದಂತೆ, ವಾಟ್ಸಪ್ಪ್ ಗಳಲ್ಲಿ ಚರ್ಚೆಗಳು ನಡೆಯುತ್ತಿದ್ದು, ಈ ಸಂದೇಶಗಳು ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ಪರವಾಗಿ ಈ ಹಿಂದೆ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘನೆ ಮಾಡುವ ಸಾಧ್ಯತೆ ಮತ್ತು ಬಲವಂತವಾಗಿ ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ಕೂಡ ಚರ್ಚೆಗಳು ನಡೆದಿವೆ ಎಂದು ವಾದದ ಸಮಯ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 6 ರಂದು ಪ್ರತಿಭಟನೆ ನಡೆಸಿ, ಸೌಜನ್ಯ ಅತ್ಯಾಚಾರ ಕೊ*ಲೆ ಪ್ರಕರಣದ ನ್ಯಾಯಕ್ಕಾಗಿ ವಾಹನ ಜಾಥ ಮತ್ತು ಬೆಳ್ತಂಗಡಿ ಮಿನಿ ವಿಧಾನ ಸೌದದ ಮುಂದೆ ಬೃಹತ್ ಹಕ್ಕೊತ್ತಾಯ ಸಭೆ ನಡೆಸಬೇಕೆಂದಿದ್ದ ಸಂಘಟನೆಗಳಿಗೆ ಹೈ ಕೋರ್ಟ್ ನ ಈ ತಡೆಯಾಜ್ಞೆ ನಿರಾಸೆಯನ್ನು ತಂದಿದೆ.
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ವತಿಯಿಂದ ವಾಹನ ಜಾಥಾ