ನಳಿನ್ ಕುಮಾರ್ ಕಟೀಲ್ ರವರಿಗೆ ಮತ್ತೊಮ್ಮೆ ರಾಜಕೀಯ ಸ್ಥಾನಮಾನ ಸಿಗಲಿ - ಮಧೂರು ದೇವರಿಗೆ ಪ್ರಾರ್ಥನೆ ಮಾಡಿದ ಡಿಕೆಸಿ

  • 06 Apr 2025 02:38:10 PM

Madhur, April 06, 2025 : ಕೇರಳದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನಲೆಯಲ್ಲಿ ಬಹಳಷ್ಟು ಗಣ್ಯರು ರಾಜಕೀಯ ವ್ಯಕ್ತಿಗಳು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಮಧೂರು ಕ್ಷೇತ್ರಕ್ಕೆ ಭೇಟಿ ಕೊಟ್ಟು ಶ್ರೀ ದೇವರ ಆಶೀರ್ವಾದಕ್ಕೆ ಪಾತ್ರರಾಗಿದ್ದಾರೆ.

 

ಆದರೆ, ಬ್ರಹ್ಮಕಲೋತ್ಸವದ ಸಭಾ ಕಾರ್ಯಕ್ರಮದಲ್ಲಿ, ಡಿಕೆಶಿ ಯವರು ನಳಿನ್ ಕುಮಾರ್ ಕಟೀಲ್ ಪರ ಬ್ಯಾಟಿಂಗ್ ಮಾಡಿದ್ದು ಕೇಳಲು ಬಹಳ ಅಶಕ್ತಿದಾಯಕವಾಗಿತ್ತು. ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು.

 

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆಶಿ, "ನನ್ನ ಮಿತ್ರರು ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾಗ, ನಳಿನ್ ಕುಮಾರ್ ಕಟೀಲ್ ಕೂಡಾ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ಸಂಸದರಾಗಿ, ಬಹಳ ಉತ್ತಮವಾದ ರಾಜಕೀಯ ಮಾಡಿ ಜನರ ಸೇವೆ ಮಾಡಿದ್ದರು. ನಾನು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಅಂತ ನಾನೂ ಕೂಡ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುತ್ತೇನೆ" ಎಂದು ಸ್ನೇಹದ ಮಾತನ್ನು ಆಡಿದರು.