ವಿಟ್ಲ, April 07, 2025 : ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಕಲಾವಿದ ಹಾಗು ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದ್ದು, ತುಳು ರಂಗಭೂಮಿ ಒಬ್ಬ ಕಲಾವಿದನನ್ನು ಕಳೆದುಕೊಂಡಿದೆ.
ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರಂತೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿತ್ತು.
ಆದರೆ, ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ. ಕಲಾವಿದನ ನಿಧನಕ್ಕೆ ಕಲಾಭಿಮಾನಿಗಳು, ಸಹ ಕಲಾವಿದರು, ವಿಟ್ಲದ ಜನತೆ ಕಂಬನಿ ಮಿಡಿದಿದ್ದಾರೆ. ಮೃತರು ಹೆಂಡತಿ ಮತ್ತು ಓರ್ವ ಮಗನನ್ನು ಅಗಲಿದ್ದಾರೆ. ನಾಳೆ ವಿಟ್ಲದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.