ಬೆಳ್ತಂಗಡಿ, Aprlil 07, 2025 : ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಕ್ಯಾಂಪಸ್‌ನಲ್ಲಿ ತರಕಾರಿಗಳು, ಹಣ್ಣುಗಳು ಮತ್ತು ಜೇನುತುಪ್ಪವನ್ನು ಬೆಳೆಸಿ, ಅದರಿಂದ ಬಂದ ಉತ್ಪನ್ನಗಳನ್ನು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಗೆ ತೆರಳಿ ಅವರಿಗೆ ನೀಡಿದ್ದಾರೆ.
ಶಿಕ್ಷಣ ಮತ್ತು ಕೃಷಿಗೆ ಉತ್ತೇಜನ ಈ ಹೃದಯಸ್ಪರ್ಶಿ ಯೋಜನೆಯಲ್ಲಿ, ಶಾಲಾ ಕಲಿಕೆಯ ಭಾಗವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸಲ್ಪಟ್ಟ ಮಕ್ಕಳು, ತಮ್ಮ ಸುಗ್ಗಿಯನ್ನು ಹೆಮ್ಮೆಯಿಂದ ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.
ಮಕ್ಕಳ ಈ ಕೃಷಿಯ ಬಗ್ಗೆ ಅವರ ಉತ್ಸಾಹ ಮತ್ತು ಬದ್ಧತೆಯನ್ನು ತಿಳಿದು ಮುಖ್ಯಮತ್ರಿ ಸಂತಸ ವ್ಯಕ್ತಪಡಿಸಿದ್ದರು. ಶಾಲಾ ಶಿಕ್ಷಕರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ಮತ್ತು ಯುವ ನಾಯಕ ರಕ್ಷಿತ್ ಶಿವರಾಮ್ ಸಂವಾದದ ಸಮಯದಲ್ಲಿ ಉಪಸ್ಥಿತರಿದ್ದರು.
ಮಕ್ಕಳನ್ನು ಮತ್ತು ಶಾಲೆಯ ಶಿಕ್ಷಕರನ್ನು ಪ್ರೋತ್ಸಾಹಿಸುವ ಸಲುವಾಗಿ, ಮುಖ್ಯಮಂತ್ರಿಗಳು ಕುತ್ಲೂರು ಸರ್ಕಾರಿ ಶಾಲೆಗೆ ಎರಡು ಕಂಪ್ಯೂಟರ್‌ಗಳನ್ನು ಉಡುಗೊರೆಯಾಗಿ ನೀಡಿದರು ಮತ್ತು ಮಕ್ಕಳ ಸಾಧನೆಯನ್ನು ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ.