ಮಂಗಳೂರು/ಪುತ್ತೂರು: ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 9 ಮಂದಿ ಮಹಿಳಾ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ, ಅವರಿಗೆ ಮತ್ತೆ ಉದ್ಯೋಗ ದೊರೆತಿರುವುದಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಶಾಸಕರ ಹೇಳಿಕೆಯ ಪ್ರಕಾರ, ಕೆಲಸದಿಂದ ವಜಾಗೊಂಡಿದ್ದ ಮಹಿಳಾ ಸಿಬ್ಬಂದಿ ಕಳೆದ ವಾರ ತಮ್ಮ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದರು. ಈ ವೇಳೆ ಅವರ ಸಮಸ್ಯೆಯನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಬ್ಬಂದಿಯನ್ನು ವಜಾಗೊಳಿಸದಂತೆ ಸೂಚನೆ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಜಾಗೊಂಡಿದ್ದ 9 ಮಂದಿ ಮಹಿಳಾ ಸಿಬ್ಬಂದಿಗೆ ಪುನಃ ಉದ್ಯೋಗಾವಕಾಶ ದೊರೆತಿದ್ದು, ಅವರು ಇಂದು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಅಶೋಕ್ ಕುಮಾರ್ ರೈ, ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ





