21 September 2026 |

ಒಮಾನ್ ಸಮೀಪ ಭಾರತೀಯ ಸಿಬ್ಬಂದಿ ಇದ್ದ ಹಡಗು ಮೇಲೆ ದಾಳಿ: ಮೂವರು ನಾವಿಕರ ಸಾವು,

  • 11 Jun 2026 10:17:29 AM

ಒಮಾನ್ ಕರಾವಳಿ ಸಮೀಪದ ಹೋರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯ ಬಳಿಕ 24 ಭಾರತೀಯ ಸಿಬ್ಬಂದಿಗಳ ಪೈಕಿ 21 ಮಂದಿಯನ್ನು ರಕ್ಷಿಸಲಾಗಿದೆ. ಮೂವರು ಭಾರತೀಯ ನಾವಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

 

ಘಟನೆಗೆ ಸಂಬಂಧಿಸಿದಂತೆ ಭಾರತ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ.

 

ಈ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಯನ್ನು ತಕ್ಷಣ ಕಡಿಮೆ ಮಾಡುವಂತೆ (ಡಿ-ಎಸ್ಕಲೇಷನ್) ಕರೆ ನೀಡಿದೆ. ನಾಪತ್ತೆಯಾಗಿರುವ ನಾವಿಕರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.