13 June 2026 |

ಶಾಲಾ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಸಾರ್ವಜನಿಕರ ಆಕ್ರೋಶ

  • 12 Jun 2026 07:41:44 PM

ಕಲಬುರಗಿ:  ನಗರದ ಎಸ್ಪಿ ಕಚೇರಿ ಸಮೀಪದ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದಾಗ ಮೇಲ್ಛಾವಣಿ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. 

 

ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ಬಿದ್ದಿ ಚಿತ್ರಣ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಗಾಯಗೊಂಡವರನ್ನು ಪೂಜಾ, ಶೀತಲ್, ಸೃಷ್ಟಿ, ಸ್ನೇಹಾ ಮತ್ತು ದಿವ್ಯಾ ಎಂದು ಗುರುತಿಸಲಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಜಿಮ್ಸ್ (GIMS) ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಪ್ರಸ್ತುತ ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಅದೃಷ್ಟವಶಾತ್ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. 2017 ರಲ್ಲಿ ನಿರ್ಮಿಸಲಾದ ಈ ಕಟ್ಟಡದ ಕಳಪೆ ಕಾಮಗಾರಿಯೇ ದುರಂತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.

 

ಈ ಘಟನೆಯು ಪೋಷಕರು ಮತ್ತು ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದ್ದು, ಸರ್ಕಾರಿ ಶಾಲೆ-ಕಾಲೇಜುಗಳ ಸುರಕ್ಷತೆ ಹಾಗೂ ಕಟ್ಟಡಗಳ ನಿರ್ವಹಣೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.