ಬೆಂಗಳೂರು: ಗೃಹ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು, ಸಂಸ್ಥೆಯ ನೋಂದಣಿ, ಹಣಕಾಸು ಮೂಲಗಳು, ತೆರಿಗೆ ಪಾವತಿ ಹಾಗೂ ಸಾರ್ವಜನಿಕ ಚಟುವಟಿಕೆಗಳ ಕುರಿತು ಪಾರದರ್ಶಕತೆ ಕಾಪಾಡುವಂತೆ ಆಗ್ರಹಿಸಿದ್ದಾರೆ.
ಪತ್ರದ ವಿಷಯವನ್ನು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದು, ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಸಂದರ್ಭದಲ್ಲಿ ಸಂವಿಧಾನಾತ್ಮಕ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.
ಪತ್ರದ ಸಂಪೂರ್ಣ ಪ್ರತಿಯನ್ನು ಕೆಳಗೆ ನೀಡಲಾಗಿದೆ.


ಈ ಕುರಿತು ಆರ್‌ಎಸ್‌ಎಸ್‌ನ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.





