21 September 2026 |

ಅಮ್ಟೂರಿನಲ್ಲಿ 65 ಲಕ್ಷ ರೂ. ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿ ವೀಕ್ಷಣೆ – ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನಕ್ಕೆ ಚಾಲನೆ

  • 18 Jun 2026 01:53:04 PM

ಬಂಟ್ವಾಳ: ಕೇಂದ್ರ ಸರ್ಕಾರದ 65 ಲಕ್ಷ ರೂಪಾಯಿಗಳ ಅನುದಾನದಲ್ಲಿ ಕಲ್ಲಡ್ಕ ಸಮೀಪದ ಅಮ್ಟೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಂಟ್ವಾಳ ವಿಧಾನಸಭಾ ಶಾಸಕ ರಾಜೇಶ್ ನಾಯ್ಕ್ ಅವರು ಪರಿಶೀಲಿಸಿದರು.

 

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟದ ಕುರಿತು ಮಾಹಿತಿ ಪಡೆದುಕೊಂಡರು.

 

ಬಳಿಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಶಯದಂತೆ ನಡೆಯುತ್ತಿರುವ ‘ಏಕ್ ಪೇಡ್ ಮಾಂ ಕೆ ನಾಮ್’ (Ek Ped Maa Ke Naam) ಅಭಿಯಾನದ ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.

 

ಆರೋಗ್ಯ ಸೇವೆಗಳನ್ನು ಗ್ರಾಮೀಣ ಜನತೆಗೆ ಇನ್ನಷ್ಟು ಸಮೀಪಿಸುವ ಉದ್ದೇಶದಿಂದ ನಿರ್ಮಾಣವಾಗುತ್ತಿರುವ ಈ ಆರೋಗ್ಯ ಕೇಂದ್ರವು ಸ್ಥಳೀಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು.