20 June 2026 |

ಸುರತ್ಕಲ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಬ್ರಿಜೇಶ್ ಚೌಟ ಭೇಟಿ

  • 19 Jun 2026 11:38:47 AM

ಮಂಗಳೂರು: ಸುರತ್ಕಲ್ ರೈಲು ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ಅನುದಾನದ ನೆರವಿನಿಂದ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಮಂಜೂರಾದ ₹2.1 ಕೋಟಿ ಅನುದಾನದಡಿ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ, ಆಧುನಿಕ ಸೌಲಭ್ಯಗಳಿರುವ ಮೇಲ್ಫಾವಣಿ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಅವುಗಳ ಸ್ಥಿತಿಗತಿಯನ್ನು ಸಂಸದರು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಹುತೇಕ ಕಾಮಗಾರಿಗಳು ಅಂತಿಮ ಹಂತ ತಲುಪಿರುವುದರಿಂದ, ಸಾಧ್ಯವಾದಷ್ಟು ಬೇಗ ಪ್ರಯಾಣಿಕರ ಬಳಕೆಗೆ ನಿಲ್ದಾಣದ ಸೌಲಭ್ಯಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ರಾಮ ಅಮೀನ್ ಪಚ್ಚನಾಡಿ, ತಿಲಕ್‌ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ದಿನಕರ ಇಡ್ಯ, ಬಾಲಕೃಷ್ಣ ಶೆಟ್ಟಿ ಕೆಂಚನೂರು, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ವೇತಾ ಪೂಜಾರಿ ಹಾಗೂ ಸರಿತಾ ಶಶಿಧರ್, ಕೊಂಕಣ್ ರೈಲ್ವೆಯ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.