* ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಧ್ವಜಸ್ತಂಭವನ್ನು ಬಾವುಟಗುಡ್ಡೆಯಲ್ಲಿ ನಿರ್ಮಾಣ.
* ಸುಮಾರು 100 ಅಡಿಗೂ ಹೆಚ್ಚಿನ ಎತ್ತರದ ಧ್ವಜಸ್ತಂಭ ನಿರ್ಮಾಣ
* ದೇಶಪ್ರೇಮ ಪ್ರೇರೇಪಿಸುವ ಕೆಲಸ ಮಾಡುತ್ತೇವೆ - ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಏಪ್ರಿಲ್ 08 : ಸ್ವಾತಂತ್ರ್ಯ ಹೋರಾಟಗಾರ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ಧ್ವಜ ಹಾರಿಸಿ, 13 ದಿನಗಳ ಕಾಲ ಆಡಳಿತ ನಡೆಸಿದ ಸಂಸ್ಮರಣಾ ದಿನಾಚರಣೆಯ ಅಂಗವಾಗಿ, ಬಾವುಟಗುಡ್ಡೆಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗ ಶನಿವಾರ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ವೀರರ ಸ್ಮರಣೆ ಮಾಡುವ ಮೂಲಕ ನಮ್ಮ ದೇಶದ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ವೀರರ ತ್ಯಾಗ ಬಲಿದಾನವನ್ನು ಮರೆಯಬಾರದು ಎಂದು ನುಡಿದ್ದಾರೆ.
ಮಂಗಳೂರಿನ ಬಾವುಟಗುಡ್ಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಸುಮಾರು 100 ಅಡಿಗೂ ಅಧಿಕ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡುವ ಮೂಲಕ ದೇಶಪ್ರೇಮ ಪ್ರೇರೇಪಿಸುವ ಕಾರ್ಯ ಮಾಡುವುದಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.