21 September 2026 |

ನಿಮ್ಮ ‘ಕೊಡೆ-ರೇನ್‌ಕೋಟ್’ ಸಿದ್ಧವಾಗಿರಲಿ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ

  • 23 Jun 2026 01:23:37 PM

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಜೂನ್ 23ರಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಒಂದು ದಿನದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಇದೇ ವೇಳೆ, ಜೂನ್ 27ರವರೆಗೆ ಕರಾವಳಿ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ತೀವ್ರವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರ ತೀರ ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.