ಚಿತ್ರ ಕೇವಲ ವಿವರಣೆಗೆ ಬಳಸಲಾಗಿದೆ
*ರಾಜ್ಯದಾದ್ಯಂತ ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ
* ಉಡುಪಿ ಜಿಲ್ಲೆ ಪ್ರಥಮ ಸ್ಥಾನ
* ದಕ್ಷಿಣ ಕನ್ನಡ ದ್ವಿತೀಯ ಸ್ಥಾನ
* ಯಾದಗಿರಿ ಕೊನೆಯ ಸ್ಥಾನ
Karnataka PUC Reslut 2020-25 : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕರಾವಳಿ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯ 2024-25 ನೇ ಸಾಲಿನ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪ್ರಕಟಿಸಿದರು.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ ಪ್ರಕಟವಾಗಿದೆ.
ಉಡುಪಿ ಜಿಲ್ಲೆ ಪ್ರಥಮ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದೆ. ಉಡುಪಿ ಶೇ. 93.90 ಮತ್ತು ದಕ್ಷಿಣ ಕನ್ನಡ ಶೇ. 93.57% ಪಡೆದಿದೆ.
ಉತ್ತರ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆ ಶೇ. 48.45 ಪಡೆದು ಕೊನೆಯ ಸ್ಥಾನದಲ್ಲಿದೆ.