21 September 2026 |

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಯು.ಟಿ. ಖಾದರ್ ನೇಮಕ – ಉಡುಪಿ, ಕೊಡಗು, ಉತ್ತರ ಕನ್ನಡಕ್ಕೂ ಹೆಚ್ಚುವರಿ ಜವಾಬ್ದಾರಿ

  • 26 Jun 2026 10:22:59 AM

ಮಂಗಳೂರು: ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರಿಗೆ ವಹಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಖಾದರ್ ಅವರಿಗೆ ಪ್ರಸ್ತುತ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪೂರ್ಣ ಪ್ರಮಾಣದ ಜವಾಬ್ದಾರಿಗಳ ಮರುಹಂಚಿಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದರೊಂದಿಗೆ ಯು.ಟಿ. ಖಾದರ್ ಅವರಿಗೆ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನೂ ಸರ್ಕಾರ ನೀಡಿದೆ. ಹಲವು ಜಿಲ್ಲೆಗಳ ಆಡಳಿತಾತ್ಮಕ ಕಾರ್ಯಗಳ ಮೇಲ್ವಿಚಾರಣೆ ಮಾಡುವ ಮಹತ್ವದ ಹೊಣೆಗಾರಿಕೆ ಇದೀಗ ಅವರ ಹೆಗಲೇರಿದೆ.

ಈ ನೇಮಕಾತಿಯಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳ ಆಡಳಿತ ಮತ್ತು ವಿಪತ್ತು ನಿರ್ವಹಣಾ ಕಾರ್ಯಗಳಿಗೆ ಮತ್ತಷ್ಟು ಚುರುಕು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.: ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರಿಗೆ ವಹಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಖಾದರ್ ಅವರಿಗೆ ಪ್ರಸ್ತುತ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪೂರ್ಣ ಪ್ರಮಾಣದ ಜವಾಬ್ದಾರಿಗಳ ಮರುಹಂಚಿಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದರೊಂದಿಗೆ ಯು.ಟಿ. ಖಾದರ್ ಅವರಿಗೆ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನೂ ಸರ್ಕಾರ ನೀಡಿದೆ. ಹಲವು ಜಿಲ್ಲೆಗಳ ಆಡಳಿತಾತ್ಮಕ ಕಾರ್ಯಗಳ ಮೇಲ್ವಿಚಾರಣೆ ಮಾಡುವ ಮಹತ್ವದ ಹೊಣೆಗಾರಿಕೆ ಇದೀಗ ಅವರ ಹೆಗಲೇರಿದೆ.

ಈ ನೇಮಕಾತಿಯಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳ ಆಡಳಿತ ಮತ್ತು ವಿಪತ್ತು ನಿರ್ವಹಣಾ ಕಾರ್ಯಗಳಿಗೆ ಮತ್ತಷ್ಟು ಚುರುಕು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.