ಕಾಸರಗೋಡು: ಮೊಬೈಲ್ ಫೋನ್ ಖರೀದಿಸುವ ವಿಚಾರದಲ್ಲಿ ಉಂಟಾದ ಬೇಸರದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ವೀಪುಗುರಿ ನಿವಾಸಿಯಾಗಿದ್ದ ಪೃಥ್ವಿಕಾ (17) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಪೃಥ್ವಿಕಾ, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗಕ್ಕೆ ಸೇರ್ಪಡೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ತನ್ನ ಪೋಷಕರ ಬಳಿ ಹೊಸ ಮೊಬೈಲ್ ಫೋನ್ ಖರೀದಿಸಿಕೊಡುವಂತೆ ಮನವಿ ಮಾಡಿದ್ದಳು. ತಂದೆ ಫೋನ್ ಖರೀದಿಸಲು ಸಮ್ಮತಿ ಸೂಚಿಸಿದ್ದರೆಂದು ತಿಳಿದುಬಂದಿದೆ.
ಆದರೆ, ಈ ಹಂತದಲ್ಲಿ ಮೊಬೈಲ್ ಅಗತ್ಯವಿಲ್ಲ ಎಂಬ ಅಭಿಪ್ರಾಯದಿಂದ ತಾಯಿ ಫೋನ್ ತೆಗೆದುಕೊಡುವುದಕ್ಕೆ ಒಪ್ಪದಿದ್ದರೆಂದು ಹೇಳಲಾಗಿದೆ. ಇದರಿಂದ ಮನನೊಂದ ಪೃಥ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ಪಡೆದ ಕಾಸರಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸ್ವಾಭಾವಿಕ ಮರಣ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.





