29 June 2026 |

ರೀಲ್ಸ್ ಚಿತ್ರೀಕರಣ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ

  • 28 Jun 2026 08:29:59 PM

ಮಂಗಳೂರು/ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಮ್ಮಸ್ಸು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವೊಮ್ಮೆ ಇದು ಅಪಾಯಕರ ಪರಿಸ್ಥಿತಿಗೂ ಕಾರಣವಾಗುತ್ತಿದೆ. ಇಂತಹದ್ದೇ ಒಂದು ಘಟನೆ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ.

 

ಹಾಸನದ ಪಿಯು ಕಾಲೇಜಿನ ಉಪನ್ಯಾಸಕರಾದ ಶಿವಪ್ರಸಾದ್ ರಜೆ ದಿನವನ್ನು ಕಳೆಯಲು ದೇವರಾಯನದುರ್ಗಕ್ಕೆ ಭೇಟಿ ನೀಡಿದ್ದರು. ಅಲ್ಲಿನ ನೈಸರ್ಗಿಕ ಸೌಂದರ್ಯವನ್ನು ಹಿನ್ನೆಲೆಯಾಗಿ ಮಾಡಿಕೊಂಡು ರೀಲ್ಸ್ ಚಿತ್ರೀಕರಿಸಲು ಮುಂದಾದ ವೇಳೆ ಅವರು ಕಾಲು ಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ.

 

ಘಟನೆಯಲ್ಲಿ ಶಿವಪ್ರಸಾದ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

 

ಈ ಘಟನೆ ಹಿನ್ನೆಲೆಯಲ್ಲಿ ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.